ಹುಬ್ಬಳ್ಳಿ – ಕೊಲ್ಲಂ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು, ವೇಳಾಪಟ್ಟಿ

0
25

ಹುಬ್ಬಳ್ಳಿ: ದಸರಾ ಹಬ್ಬ ಮತ್ತು ಶಬರಿಮಲೆ ಯಾತ್ರೆಯ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಕೊಲ್ಲಂ ನಡುವೆ 14 ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಿದೆ.

ವೇಳಾಪಟ್ಟಿ ವಿವರ: ರೈಲು ಸಂಖ್ಯೆ 07313 ಎಸ್‌ಎಸ್‌ಎಸ್ ಹುಬ್ಬಳ್ಳಿ – ಕೊಲ್ಲಂ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆ. 28 ರಿಂದ ಡಿ. 28 ರವರೆಗೆ ಪ್ರತಿ ಭಾನುವಾರ ಸಂಜೆ 3.15ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮರುದಿನ ಮಧ್ಯಾಹ್ನ 12.55 ಕ್ಕೆ ಕೊಲ್ಲಂ ತಲುಪಲಿದೆ.

ರೈಲು ಸಂಖ್ಯೆ 07314 ಕೊಲ್ಲಂ – ಎಸ್‌ಎಸ್‌ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆ. 29 ರಿಂದ ಡಿ. 29 ರವರೆಗೆ ಪ್ರತಿ ಸೋಮವಾರ ಸಂಜೆ 5ಕ್ಕೆ ಕೊಲ್ಲಂನಿಂದ ಹೊರಟು, ಮರುದಿನ ಸಂಜೆ 6.30ಕ್ಕೆ ಹುಬ್ಬಳ್ಳಿ ಆಗಮಿಸಲಿದೆ.

22 ಬೋಗಿಗಳು: ಈ ವಿಶೇಷ ರೈಲು ಒಟ್ಟು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ 1 ಎಸಿ 2-ಟೈರ್, 2 ಎಸಿ 3-ಟೈರ್, 12 ಸ್ಲೀಪರ್ ಕ್ಲಾಸ್, 5 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳು ಇರಲಿವೆ.

ನಿಲ್ದಾಣಗಳು: ಮಾರ್ಗಮಧ್ಯೆ ಈ ವಿಶೇಷ ರೈಲು, ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಎಸ್‌ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೇರಿ, ತಿರುವಲ್ಲ, ಚೆಂಗನ್ನೂರು, ಮಾವೆಲಿಕರ, ಕಾಯಂಕುಲಂ, ಕರುನಾಗಪಳ್ಳಿ ಮತ್ತು ಸಂಸ್ಥಾನಕೋಟ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

Previous articleಬಾಗಲಕೋಟೆ: ಉಚ್ಚಾಟನೆ ಅಧಿಕಾರ ಟ್ರಸ್ಟಿಗೆ ಇಲ್ಲ, ಹೊಸ ಪೀಠ ಕಟ್ಟುವುದಿಲ್ಲ
Next articleವಿಜಯಪುರ: ಬ್ಯಾಂಕ್ ಅಧಿಕಾರಿಗಳಿಗೆ ಎಸ್.ಪಿ. ಸೆಕ್ಯೂರಿಟಿ ಟಿಪ್ಸ್

LEAVE A REPLY

Please enter your comment!
Please enter your name here