ಬೆಂಗಳೂರು: ರಾಜ್ಯದ ಪ್ರಮುಖ ಹಾಗೂ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಪಿಇಎಸ್ (PES) ಶಿಕ್ಷಣ ಸಂಸ್ಥೆಗಳ ಮೇಲೆ ಇಂದು ಬೆಳಗ್ಗೆಯೇ ಆದಾಯ ತೆರಿಗೆ (IT) ಇಲಾಖೆಯು ಭಾರಿ ದಾಳಿ ನಡೆಸಿದೆ. ಬೆಳ್ಳಂ ಬೆಳಗ್ಗೆ 6 ಗಂಟೆಯ ಸುಮಾರಿಗೆ ಅಧಿಕಾರಿಗಳ ತಂಡವು ಏಕಕಾಲದಲ್ಲಿ ದಾಳಿ ನಡೆಸಿದ್ದು, ಸಂಸ್ಥೆಯ ಶಾಖೆಗಳು, ನಿರ್ವಹಣಾ ಮಂಡಳಿಯವರ ಮನೆಗಳು ಹಾಗೂ ಕಚೇರಿಗಳಲ್ಲಿ ಸತತ ಶೋಧ ಕಾರ್ಯ ಮುಂದುವರಿಯುತ್ತಿದೆ.
ಬನಶಂಕರಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ಇರುವ ಪಿಇಎಸ್ ಮಾಲೀಕರಾದ ದೊರೆಸ್ವಾಮಿ ನಾಯ್ಡು ಅವರ ಮನೆ ಹಾಗೂ ಸಂಬಂಧಿಕರ ಮನೆಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು, ಎಲೆಕ್ಟ್ರಾನಿಕ್ ಸಿಟಿ ಕಾಲೇಜು, ಹನುಮಂತನಗರ ಕಾಲೇಜ, ಆಂಧ್ರದ ಕುಪ್ಪಂ ಕಾಲೇಜು ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ರಾಜ್ಯ ಹಾಗೂ ಹೊರ ರಾಜ್ಯದಲ್ಲಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ ಶಾಖೆಗಳ ಮೇಲೆ ದಾಳಿ ನಡೆಸಲಾಗಿದೆ.
ಬನಶಂಕರಿ ಬಿಡಿಎ ಕಾಂಪ್ಲೇಕ್ಸ್ ಬಳಿಯ ದೊರೆಸ್ವಾಮಿ ನಾಯ್ಡು ಮನೆ ಮೇಲೂ ದಾಳಿ ನಡೆದಿದೆ. ಬಳಿಕ ದೊರೆಸ್ವಾಮಿ ನಾಯ್ಡು ಅವರ ಸಂಬಂಧಿಕರು, ಉದ್ಯಮಿಗಳ ಮನೆಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.
ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಇಂದು ಬೆಳಗ್ಗೆ 6 ಗಂಟೆಗೆ 100ಕ್ಕೂ ಹೆಚ್ಚು ಅಧಿಕಾರಿಗಳು ಏಕಕಾಲಕ್ಕೆ ವಿವಿಧೆಡೆ ದಾಳಿ ನಡೆಸಿದ್ದಾರೆ. ದಿವಂಗತ ದೊರೆಸ್ವಾಮಿ ನಾಯ್ಡು ಅವರು ಸ್ಥಾಪಿಸಿದ್ದ ಪಿಇಎಸ್ ಶಿಕ್ಷಣ ಸಂಸ್ಥೆಯನ್ನು ಅವರ ಪುತ್ರ ಜವಹರ್ ದೊರೆಸ್ವಾಮಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.
Good news I am getting through out day Including Bhagwat Geeta Shlokarth