ಏನನ್ನು ತಿನ್ನಬೇಕು ಎಂದು ಬಿಜೆಪಿಯವರು ನಿರ್ಧರಿಸಬೇಕೆ?

0
28
ದಿನೇಶ್‌ ಗುಂಡೂರಾವ್

ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಕೀಳು ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು? ಏನನ್ನು ತಿನ್ನಬಾರದು ಎಂದು ಬಿಜೆಪಿಯವರು ನಿರ್ಧರಿಸಬೇಕೆ? ನಮ್ಮ ಆಹಾರ, ನಮ್ಮ ಹಕ್ಕು. ಇದನ್ನು ಕೇಳಲು ಬಿಜೆಪಿಯವರಿಗೆ ಅಧಿಕಾರ ಕೊಟ್ಟವರ್ಯಾರು? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.
ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ. ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ? ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು‌ ನಮ್ಮ ಪಕ್ಷಕ್ಕೆ ವೋಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

Previous articleಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತದೆ: ಜಗ್ಗೇಶ್
Next articleಅಪರೂಪದ ಬಿಳಿ ಹೆಬ್ಬಾವು ಕುಮಟಾದಲ್ಲಿ ಪತ್ತೆ