ಕರೂರು: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆಯುತ್ತಿದ್ದ ರಾಜಕೀಯ ರ‍್ಯಾಲಿಯಲ್ಲಿ ನಡೆದ ಭೀಕರ ಕಾಲ್ತುಳಿತದ ಘಟನೆಯಲ್ಲಿ 40 ಜನರು ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಈ ತುರ್ತು ಮತ್ತು ದು:ಖಕರ ಘಟನೆಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಪರಿಹಾರ ನಿಧಿ (PMNRF) ಮೂಲಕ ಮೃತರು ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲು ಘೋಷಿಸಿದ್ದಾರೆ. ಗಾಯಾಳುಗಳಿಗೆ ಪ್ರತ್ಯೇಕವಾಗಿ ತಲಾ 50,000 ರೂಪಾಯಿಗಳ ತುರ್ತು ನೆರವಿನ ಘೋಷಣೆ ಮಾಡಿದ್ದಾರೆ.
ಪಿಎಂಒ (PMO) ಮೂಲಕ ಹಂಚಿಕೊಂಡ ಅಧಿಕೃತ ಪ್ರಕಟಣೆಯಲ್ಲಿ, “ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ‍್ಯಾಲಿಯಲ್ಲಿ ನಡೆದ ದುಃಖಕರ ಘಟನೆಯಲ್ಲಿ ಸಾವನ್ನಪ್ಪಿದ ಪ್ರತಿಯೊಬ್ಬರ ಹತ್ತಿರದ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ತುರ್ತು ನೆರವಾಗಿ ಪ್ರತಿ ವ್ಯಕ್ತಿಗೆ 50,000 ರೂಪಾಯಿ ನೀಡಲಾಗುತ್ತದೆ” ಎಂದು ತಿಳಿಸಲಾಗಿದೆ.