ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್: ನೇಮಕಾತಿಗಳಲ್ಲಿ ವಯೋಮಿತಿ ಸಡಿಲಿಕೆ

1
44

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೋಮವಾರ ಆದೇಶ ಪ್ರಕಟಿಸಿದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್‌ಲಾಗ್ ಹುದ್ದೆ ಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿ ಸೂಚನೆಯನ್ನು ಮುಂದಿನ ಆದೇಶದವರೆಗೂ ಹೊರಡಿಸ ಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು. ನ್ಯಾಯಮೂರ್ತಿ ಹೆಚ್.ಎನ್. ನಾಗ ಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಲಾಗಿತ್ತು.

ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6ರಷ್ಟು, ಪ್ರವರ್ಗ-ಬಿರಲ್ಲಿನ ಸಮುದಾಯಗಳಿಗೆ ಶೇಕಡ 6ರಷ್ಟು ಮತ್ತು ಪ್ರವರ್ಗ-ಸಿರಲ್ಲಿನ ಸಮುದಾಯಗಳಿಗೆ ಶೇಕಡ 5ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.

ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿತ್ತು. ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (ಒನ್ ಟೈಮ್) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.

ಆದರೆ ಹಲವಾರು ಜನಪ್ರತಿನಿದಿಗಳು ಮತ್ತು ಸಂಘ-ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು. ಈ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ, ದಿನಾಂಕ: 06.09.2025ರ ಆದೇಶದ ಹಿಂಪಡೆದು, ಹೊಸ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31-12-2027ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (ಒನ್ ಟೈಮ್) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಸೇವಾ ನಿಯಮಗಳು) ಇಲಾಖೆ ಆದೇಶ ಹೊರಡಿಸಿದೆ.

Previous article`ಮಹಾ’ ಅವೈಜ್ಞಾನಿಕ ಜಲ ನಿರ್ವಹಣೆಯಿಂದ ಪ್ರವಾಹ

1 COMMENT

  1. ಈ ಆದೇಶ ಹೊಸಲು ಹೊಸವಾಗಿದೆ! ಸರ್ಕಾರ ಕೂಡ ವಯೋಮಿತಿಯನ್ನು ಹೇಗೆ ಸಡಿಲಿಕೆ ಮಾಡುತ್ತದೆ ಎಂಬುದು ನಾವರು ಕಾಣುತ್ತೇವೆ. ಒಂದು ಬಾರಿ ಮಾತ್ರ 3 ವರ್ಷಗಳು! ಅದುವರೆ ಹುಡುಕಾಡುತ್ತಿದ್ದರೆ, ಮರುವರೆ ಆಹ್ವಾನವಾಗುತ್ತದೆ. ನಿಜವಾಗಿಯೂ, ವಯೋಮಿತಿಯನ್ನು ಹೊಸ ಹೊಸವಾಗಿ ಹೊಂದಿಸಿಕೊಳ್ಳಲು ಸರಿಯಾಗಿದೆ!ai watermark

LEAVE A REPLY

Please enter your comment!
Please enter your name here