ಕಲಬುರಗಿಯಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

0
52

ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ,  ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರ ಮಾಹಿತಿ ಪಡೆದರು.

ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಜೊತೆಯಲ್ಲಿ ಮೊದಲ ಸುತ್ತಿನ‌ ವೈಮಾನಿಕ ಸಮೀಕ್ಷೆಗೆ ತೆರಳಿದರು. ಇದಾದ ಬಳಿಕ  ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ಇಂದು (ಮಂಗಳವಾರ) ಮಧ್ಯಾಹ್ನ 2:30 ರ ಸುಮಾರಿಗೆ ಕೈಗೊಳ್ಳಲಿದ್ದಾರೆ.

Previous articleಕೊಪ್ಪಳ: ಅ.6ಕ್ಕೆ ಸಿದ್ದರಾಮಯ್ಯ ಆಗಮನ, ಜನರನ್ನು ಕರೆತರಲು 1,500 ಬಸ್
Next articleಜಾತಿಗಣತಿ: ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಯಂ ಇಚ್ಛೆ

LEAVE A REPLY

Please enter your comment!
Please enter your name here