ದಾವಣಗೆರೆ: ಸತೀಶ್ ಪೂಜಾರಿ ಗಡಿಪಾರಿಗೆ ಹೈಕೋರ್ಟ್ ತಡೆ

0
58

ದಾವಣಗೆರೆ: ಹಿಂದೂ ಮುಖಂಡ ಸತೀಶ್ ಪೂಜಾರಿ ಅವರನ್ನು ಗಡಿಪಾರು ಮಾಡಿ ದಾವಣಗೆರೆ ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶಕ್ಕೆ ಉಚ್ಚ ನ್ಯಾಯಾಲಯವು ತಡೆ ನೀಡಿದೆ.

ಈ ಬಗ್ಗೆ ʼಸಂಯುಕ್ತ ಕರ್ನಾಟಕʼಕ್ಕೆ ಪ್ರತಿಕ್ರಿಯಿಸಿರುವ ಸತೀಶ್ ಪೂಜಾರಿ, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ಉಪ ವಿಭಾಗಾಧಿಕಾರಿಗಳ ಮೇಲೆ ಒತ್ತಡ ಹಾಕಿ ನನ್ನನ್ನು ಗಡಿಪಾರು ಮಾಡಿಸಿದ್ದರು ಎಂದು ಆರೋಪಿಸಿದ್ದಾರೆ.

ನನ್ನ ಮೇಲಿರುವ ಪ್ರಕರಣಗಳು ಯಾರು ಹೊರಗಿನವರು ಬಂದು ದಾಖಲಿಸಿರುವ ದೂರಲ್ಲ. ಬದಲಾಗಿ ಪೊಲೀಸರೇ ಸುಮೋಟೋ ಕೇಸು ದಾಖಲಿಸಿದ್ದಾರೆ. ಇದರ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರ ಕೈವಾಡವಿದೆ ಎಂದು ಅವರು ಆಪಾದಿಸಿದ್ದಾರೆ.

ಸತೀಶ್ ಪೂಜಾರಿ ಮೇಲೆ 23 ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಸಂತೋಷ್ ಪಾಟೀಲ್ ಎಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಂಬರುವ 2026 ಜನವರಿ 31 ರವರೆಗೆ ಗಡಿಪಾರು ಮಾಡಿ ಸೆ. 22ರಂದು ಆದೇಶಿಸಿದ್ದರು.

Previous articleಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ತನಿಖೆಗೆ ನಿರಾಕರಿಸಿದ ಹೈಕೋರ್ಟ್
Next articleಹಿರಿಯ ಪತ್ರಕರ್ತ, ಬರಹಗಾರ ಟಿಜೆಎಸ್ ಜಾರ್ಜ್ ಇನ್ನಿಲ್ಲ

LEAVE A REPLY

Please enter your comment!
Please enter your name here