ಗೃಹಲಕ್ಷ್ಮಿ ಹಣದಲ್ಲಿ ವಾಷಿಂಗ್ ಮಿಷಿನ್ ಖರೀದಿಸಿದ ಮಹಿಳೆ

0
73

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹಲಕ್ಷ್ಮಿ’. ಯೋಜನೆ ಅಡಿಯಲ್ಲಿ ಗೃಹಿಣಿಯರು 2 ಸಾವಿರ ಹಣವನ್ನು ಕೂಡಿಟ್ಟು ಮಗನಿಗೆ ಬೈಕ್ ಕೊಡಿಸಿದ್ದು, ಬೋರ್ ವೆಲ್ ಕೊರೆಸಿದ್ದು, ಪತಿಯ ಕಣ್ಣಿನ ಆಪರೇಷನ್ ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡಿದ್ದಾರೆ.

ಸದ್ಯ ರಾಮನಗರದಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆ ಹಣದಿಂದ ವಾಷಿಂಗ್ ಮಿಷಿನ್ ಖರೀದಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಮಹಿಳೆ ಬಿ.ಕೆ.ತುಳಸಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಬಂದ 7 ತಿಂಗಳ ಹಣವನ್ನು ಕೂಡಿಟ್ಟು, ವಾಷಿಂಗ್ ಮಷಿನ್ ಖರೀದಿಸಿ ಆಯುಧ ಪೂಜೆಯ ದಿನದಂದು ಅದಕ್ಕೆ ಪೂಜೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಿಎಂ ಆಫ್ ಕರ್ನಾಟಕ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಎಕ್ಸ್ ಖಾತೆಯ ಪೋಸ್ಟ್‌ನಲ್ಲಿ ಸಿಎಂ, ‘ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಅವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವೀಡಿಯೋ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು’ ಎಂದು ಸಂತಸ ಹಂಚಿಕೊಂಡಿದ್ದಾರೆ.

‘ಸ್ತ್ರೀಸಬಲೀಕರಣದ ಆಶಯದೊಂದಿಗೆ ಜಾರಿಯಾದ ಗೃಹಲಕ್ಷ್ಮಿ ಯೋಜನೆಯು ಸ್ತ್ರೀಶಕ್ತಿಯನ್ನು ಆರಾಧಿಸುವ ನವರಾತ್ರಿಯಲ್ಲಿ ಮಹಿಳೆಯೊಬ್ಬರ ಸಂಭ್ರಮಕ್ಕೆ ಕಾರಣವಾಗಿರುವುದು ಹೆಚ್ಚು ಅರ್ಥಪೂರ್ಣ ಮತ್ತು ಸಾರ್ಥಕವೆನಿಸಿದೆ. ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Previous articleಮೋದಿ ಸರ್ಕಾರದಿಂದ ಐತಿಹಾಸಿಕ ಜಿಎಸ್‌ಟಿ ಉಳಿತಾಯ ಉತ್ಸವ
Next articleದೇವನಹಳ್ಳಿ: ರೈತರಿಗೆ ಸಿಹಿಸುದ್ದಿ, ರಾಗಿ ಕನಿಷ್ಠ ಬೆಂಬಲ ಬೆಲೆ ಘೋಷಣೆ

LEAVE A REPLY

Please enter your comment!
Please enter your name here