ಕೊಪ್ಪಳ: ಸಿನಿಮಿಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಭರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಗಂಗಾವತಿ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ(31) ಕೊಲೆಯಾದ ವ್ಯಕ್ತಿ. ಸ್ನೇಹಿತರೊಂದಿಗೆ ಊಟ ಮಾಡಿದ ವೆಂಕಟೇಶ, ತಾಲ್ಲೂಕಿನ ದೇವಿಕ್ಯಾಂಪಿನಿಂದ ಗಂಗಾವತಿಗೆ ಬೈಕ್ ಮೇಲೆ ಬರುತ್ತಿದ್ದಾಗ ಹಿಂಬಾಲಿಸಿಕೊಂಡು ದುಷ್ಕರ್ಮಿಗಳು, ನಗರದ ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ ಮಂಗಳವಾರ ತಡರಾತ್ರಿ ಲಾಂಗು, ಮಚ್ಚುಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಗಂಗಾವತಿ ಡಿವೈಎಸ್ಪಿ ಸಿದ್ಧನಗೌಡ ಪಾಟೀಲ್ ಭೇಟಿ ನೀಡಿ, ಪರೀಶಿಲನೆ ನಡೆಸಿದರು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗಾವತಿಯಲ್ಲಿ ಓರ್ವ ಯುವಕನ ಕೊಲೆಯಾಗಿರುವ ಮಾಹಿತಿ ಬಂದಿದೆ. ನಾನು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದೇನೆ. ಇನ್ನು ದೂರು ನೀಡಿಲ್ಲ. ದೂರು ನೀಡುತ್ತುದ್ದಾರೆ. ಯಾರ ಮೇಲೆ ದೂರು ಕೊಡುತ್ತಾರೆ ನೊಡೋಣ. ನಾಲ್ಕೈದು ಜನ ಬಂದು ಹಲ್ಲೆ ಮಾಡಿದ್ದಾರೆ ಎನ್ನುವ ಮಾಹಿತಿ ಇದೆ. ಕಾರ್ ಡ್ಯಾಶ್ ಬೋರ್ಡ್ ಒಡೆದು, ಮಾರಣಾಂತಿಕ ಹಲ್ಲೆ ಮಾಡಿ, ಕೊಲೆ ಮಾಡಿದ್ದಾರೆ. ಕೊಲೆಗೆ ಹಳೇ ದ್ವೇಷ ಕಾರಣ ಎನ್ನುವ ಮಾಹಿತಿ ಕಲೆ ಹಾಕಲಾಗುತ್ತಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧ ಮಾಡಲಾಗವುದು ಎಂದ ಎಸ್ಪಿ ಡಾ.ರಾಮ್ ಎಲ್.ಅರಸಿದ್ಧಿ ತಿಳಿಸಿದರು.