ಬೆಳಗಾವಿ: ಬೀದಿನಾಯಿ ಹಾವಳಿ ಹೆಚ್ಚಳ

0
39

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮಾರುತಿ ನಗರ (ವಾರ್ಡ್ ನಂಬರ 38) ನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಮನೆಯ ಎದುರು ಆಟವಾಡುತ್ತಿದ್ದ ಒಂದು ವರ್ಷದ ಪುಟ್ಟ ಮಗು ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಮುಖ ಸೇರಿದಂತೆ ದೇಹದ ವಿವಿಧ ಭಾಗಗಳಲ್ಲಿ ಕಚ್ಚಿ ಗಾಯಗಳೊಸಿರುವ ಘಟನೆ ಬೆಳಕಿಗೆ ಬಂದಿದೆ.

ಸ್ಥಳೀಯರು ತಕ್ಷಣವೇ ಪೊಲೀಸ್ ಮತ್ತು ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಮುಂಚೆ ಹಲವಾರು ಬಾರಿ ಸಾರ್ವಜನಿಕರು ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಸರಿಯಾದ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರೂ ಎನ್ನಾಲಗಿದೆ. ಈ ಕುರಿತಂತೆ ಪಾಲಿಕೆಯ ನಿರ್ಲಕ್ಷ್ಯ ಮಾಡಿದ್ದರಿಂದ ಈ ಘಟನೆ ಸಂಭಚಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಮಗುವಿನ ಮೇಲೆ ದಾಳಿ ನಡೆದ ಘಟನೆ ತಿಳಿದ ತಕ್ಷಣವೇ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಆ ದಾಳಿ ಮಾಡಿದ ನಾಯಿಯನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.

ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ಆಕ್ರೋಶ ಮತ್ತು ಆತಂಕವನ್ನು ಉಂಟುಮಾಡಿದೆ. ಬೀದಿ ನಾಯಿಗಳ ಹಾವಳಿ, ಸಾರ್ವಜನಿಕ ಸುರಕ್ಷತೆ, ಹಾಗೂ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸೂಕ್ತ ನಿರ್ವಹಣಾ ಕ್ರಮಗಳು ತಕ್ಷಣ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

ಸ್ಥಳೀಯ ವೈದ್ಯಕೀಯ ಸಿಬ್ಬಂದಿ ಗಾಯಗೊಂಡ ಮಗುವಿಗೆ ತಕ್ಷಣ ಚಿಕಿತ್ಸೆ ನೀಡಿದ್ದಾರೆ. ಈ ಘಟನೆಯಿಂದ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಲ್ಲಿ ಸ್ಥಳೀಯ ಆಡಳಿತದ ವೈಫಲ್ಯವಾಗಿದೆ.

Previous articleಪಡಿತರ: ಅಕ್ಕಿ ಜತೆ ಆಹಾರ ಕಿಟ್‌ ನೀಡಲು ಸಚಿವ ಸಂಪುಟ ನಿರ್ಣಯ
Next articleಮೈಸೂರು: ಅ.17ಕ್ಕೆ ಬೃಹತ್ ಉದ್ಯೋಗ ಮೇಳ, 200ಕ್ಕೂ ಹೆಚ್ಚು ಕಂಪನಿ ಭಾಗಿ

LEAVE A REPLY

Please enter your comment!
Please enter your name here