ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ಗೇರಿ ಗ್ರಾಮದಲ್ಲಿ ನಡೆದಿದೆ.
ಚಿರತೆ ದಾಳಿಗೊಳಗಾದ ಗ್ರಾಮದ ಬೀರಪ್ಪ ಹನುಮಂತಪ್ಪ ಬಳಗಾವಿ(30) ಮೃತ ಪಟ್ಟಿದ್ದು, ಇನ್ನೊಬ್ಬ ಸಹೋದರ ಗಣೇಶ ಬಳಗಾವಿ ಗಂಭೀರ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ತಮ್ಮ ಜಮೀನಿಗೆ ನೀರು ಹಾಯಿಸಲು ತೆಳಿದ್ದ ವೇಳೆ ಏಕಾಏಕಿ ಚಿರತೆ ದಾಳಿ ನಡೆಸಿದ್ದು ಸ್ಥಳದಲ್ಲಿಯೇ ಬೀರಪ್ಪ ಎಂಬುವರು ಮೃತಪಟ್ಟಿದ್ದಾರೆ. ಇನ್ನೊಬ್ಬ ಸಹೋದರ ಗಣೇಶ ಎಂಬುವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ರಟ್ಟಿಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿದ್ದಾರೆ. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
lgyawa