ಉತ್ತರ ಕನ್ನಡ: ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ – ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ

0
18

ಕಾರವಾರ: ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತ ಉಂಟಾಗಿ, ಅದು ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23ರಿಂದ 25ರ ಬೆಳಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಭಾರೀ ಮಳೆಯೊಂದಿಗೆ ಬಿರುಸಿನ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಹಾಗೂ ಮೀನುಗಾರರಿಗೆ  ಮುನ್ನೆಚ್ಚರಿಕೆ ಸೂಚನೆ ನೀಡಿದ್ದಾರೆ:

ಅಪಾಯಕಾರಿ ಅಥವಾ ಹಳೆಯ ಮರಗಳ ನೆರಳಿನಡಿ ನಿಲ್ಲಬಾರದು.

ಶಿಥಿಲವಾದ ಕಟ್ಟಡಗಳಲ್ಲಿ ವಾಸಿಸುತ್ತಿರುವವರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು.

ಸಣ್ಣ ಹಾಗೂ ಮಧ್ಯಮ ದೋಣಿಗಳು ಸಮುದ್ರಕ್ಕೆ ಮೀನುಗಾರಿಕೆಗೆ ಇಳಿಯಬಾರದು.

ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಈ ಬಗ್ಗೆ ಎಲ್ಲಾ ಮೀನುಗಾರರಿಗೆ ಮಾಹಿತಿ ನೀಡಬೇಕು.

ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರ ತೀರ, ನದಿ ತೀರ ಅಥವಾ ನೀರಿನ ಪ್ರದೇಶಗಳಿಗೆ ಹೋಗಬಾರದು.

ಮಕ್ಕಳನ್ನು ಸಮುದ್ರ ತೀರಗಳಿಗೆ ಕರೆದೊಯ್ಯಬಾರದು ಹಾಗೂ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು.

ತುರ್ತು ಪರಿಸ್ಥಿತಿ ಉಂಟಾದಲ್ಲಿ ಜಿಲ್ಲಾ ಕಂಟ್ರೋಲ್ ರೂಂ ಅನ್ನು ಸಂಪರ್ಕಿಸಲು ಸೂಚಿಸಲಾಗಿದೆ:
08382-229857
WhatsApp: 9483511015

Previous articleಬೆಂಗಳೂರಿಗರಿಗೆ ಸಿಹಿ ಸುದ್ದಿ! ಐತಿಹಾಸಿಕ ಕಡಲೆಕಾಯಿ ಪರಿಷೆ ಈಗ ಐದು ದಿನಗಳ ಸಂಭ್ರಮ!

LEAVE A REPLY

Please enter your comment!
Please enter your name here