ಸಂ. ಕ. ಸಮಾಚಾರ, ಉಳ್ಳಾಲ: ಕಣ್ಣಿನ ಗುಡ್ಡೆ ಕಿತ್ತುಹೋದ ಸ್ಥಿತಿಯಲ್ಲಿ ನಿಗೂಢವಾಗಿ ಮೃತಪಟ್ಟಿರುವ ವ್ಯಕ್ತಿಯೊಬ್ಬರ ಮೃತದೇಹವು ಉಳ್ಳಾಲ ಠಾಣೆಯ ಕುಂಪಲ ಬೈಪಾಸ್ ಎಂಬಲ್ಲಿನ ಮನೆಯೊಂದರ ಅಂಗಳದಲ್ಲಿ ಸಿಕ್ಕಿದ್ದು, ನಾಯಿ ದಾಳಿಯಿಂದ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ ಗಟ್ಟಿ (60) ಮೃತಪಟ್ಟಿರುವ ವ್ಯಕ್ತಿ .
ಕುಂಪಲ ಬೈಪಾಸಿನ ಸಾಯಿ ಲಾಂಡ್ರಿಯ ಸಿಟ್ ಔಟ್‌ನಲ್ಲಿ ನೋಟಿನ ಕಂತೆ ಬಿದ್ದಿದ್ದು ,ನೋಟಿನ ಕಂತೆಯ ಬಳಿಯೇ ದಯಾನಂದ್ ಅವರ ಒಂದು ಕಣ್ಣಿನ ಗುಡ್ಡೆ ಬಿದ್ದಿದೆ. ಲಾಂಡ್ರಿ ಎದುರಲ್ಲೇ ದಯಾನಂದ್ ಮೇಲೆ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ. ಅವರು ಇಂದು ಬೆಳಿಗ್ಗೆ ಸಾಯಿ ಲಾಂಡ್ರಿಯ ಎದುರಿನ ಖೈರುನ್ನೀಸ ಎಂಬವರ ಮನೆಯ ಅಂಗಳದಲ್ಲಿ ಜೀವನ್ಮರಣ ಹೋರಾಟದಲ್ಲಿ ರಕ್ತದ ಮಡುವಲ್ಲಿ ಬಿದ್ದಿದ್ದರೆನ್ನಲಾಗಿದೆ.
ಪಕ್ಕದಲ್ಲೇ ಮುಖಕ್ಕೆ ರಕ್ತ ಲೇಪಿಸಿದ್ದ ಬೀದಿ ನಾಯಿಯೊಂದು ಇದ್ದು ಜನರನ್ನು ಕಂಡು ಓಡಿ ಹೋಗಿದೆ. ಸ್ಥಳೀಯರು ಘಟನೆ ಬಗ್ಗೆ ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ದಯಾನಂದ್ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಡಾ.ಮಹಾಬಲ ಶೆಟ್ಟಿ ನೇತೃತ್ವದ ಫಾರೆನ್ಸಿಕ್ ಮತ್ತು ಸೋಕೊ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಸಾಕ್ಷ್ಯ ಕಲೆ ಹಾಕಿದೆ.
ಮೇಲ್ನೋಟಕ್ಕೆ ಪ್ರಾಣಿ ದಾಳಿಯಿಂದಲೇ ದಯಾನಂದ್ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದ್ದು, ಪೊಲೀಸರು ಸಿ.ಸಿ ಕ್ಯಾಮೆರಗಳನ್ನೂ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಹೆಚ್.ಎನ್., ಎಸಿಪಿ ವಿಜಯ ಕ್ರಾಂತಿ,ಇನ್ಸ್ ಪೆಕ್ಟರ್ ವಿರೂಪಾಕ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.























Can you be more specific about the content of your article? After reading it, I still have some doubts. Hope you can help me. https://www.binance.info/register?ref=IHJUI7TF