ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿರುವ ಎಸ್‌ಐಟಿ ತಂಡ ಬೆಳ್ತಂಗಡಿ ಕೋರ್ಟ್‌ಗೆ ಗುರುವಾರ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.
ಎಸ್‌ಐಟಿ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರ ನೇತೃತ್ವದಲ್ಲಿ ಒಟ್ಟು 3,923 ಪುಟಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

























