ʻಹೇಳಲು ನನ್ನ ಬಳಿ ಏನೂ ಇಲ್ಲʼ: ಮೌನ ಮುರಿದ ಖರ್ಗೆ

0
8

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಷಯ ಜೋರಾಗಿದ್ದು, ಈ ಕುರಿತಂತೆ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಂತೆ ಏನೂ ಹೇಳಲ್ಲಿ, ಹೇಳಲು ನನ್ನ ಬಳಿ ಏನೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ವಿಷಯದ ಕುರಿತಂತೆ ಏನೇ ಇದ್ದರೂ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳುತ್ತದೆ. ಎಲ್ಲವೂ ಅಲ್ಲಿಯೇ ನಿರ್ಣಯವಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಸಮಸ್ಯೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

Previous articleನೀತಾ ಅಂಬಾನಿಗೆ ಜಾಗತಿಕ ಶಾಂತಿ ಗೌರವ
Next articleಮುಖ್ಯಮಂತ್ರಿ ಬದಲಾವಣೆ ಮಾತು ಬಾಯಿ ಚಪಲಕ್ಕಾಗಿ

LEAVE A REPLY

Please enter your comment!
Please enter your name here