ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಸಿದ್ದರಾಮಯ್ಯ

0
3

ಚಿಕ್ಕಬಳ್ಳಾಪುರ (ಶಿಡ್ಲಘಟ್ಟ): ಐದು ತಿಂಗಳ ಹಿಂದೆ ಹೈಕಮಾಂಡ್ ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚಿಸಲಾಗಿತ್ತು. ಆದರೆ ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಇದೀಗ ಯಾವ ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವನ್ನು ನಾನು ಹಾಗೂ ಡಿ.ಕೆ. ಶಿವಕುಮಾರ್ ಒಪ್ಪಬೇಕು ಎಂದರು.

ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದರು.

ನಾವು ನುಡಿದಂತೆ ನಡೆಸಿದ್ದೇವೆ, ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸುಮಾರು 2 ಸಾವಿರ ಕೋಟಿ ಮೊತ್ತದ ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ಮತ್ತು ಎಚ್‌ಎನ್ ವ್ಯಾಲಿ ಮೂರನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಿದರು.

Previous articleಐಸಿಎಫ್ಎಐ ಅಂತರರಾಷ್ಟ್ರೀಯ ತರಬೇತಿ; ನೇಪಾಳ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಪ್ರತಿನಿಧಿ ಮಂಡಳಿ ಭಾಗಿ
Next articleಬುರುಡೆ ಪ್ರಕರಣ: ಮುಖ್ಯ ಆರೋಪಿ ಚಿನ್ನಯ್ಯಗೆ 12 ಷರತ್ತುಗಳೊಂದಿಗೆ ಜಾಮೀನು

LEAVE A REPLY

Please enter your comment!
Please enter your name here