ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ: ಸಿಎಂ ಸಿದ್ದರಾಮಯ್ಯ

0
6

ಬೆಂಗಳೂರು: ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ ಎಂದರು.

ಆಹ್ವಾನ ಬಂದರೆ ದೆಹಲಿಗೆ ತೆರಳುವೆ: ನವದೆಹಲಿಗೆ ಕರೆದರೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

Previous articleಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಡಿಸಲು ಪ್ರಾಮಾಣಿಕ ಪ್ರಯತ್ನ
Next articleಸಿದ್ದರಾಮಯ್ಯ – ಡಿಕೆಶಿ ನಡುವೆ ಒಳ ಒಪ್ಪಂದ ಸತ್ಯ

LEAVE A REPLY

Please enter your comment!
Please enter your name here