ಉತ್ತರ ಕನ್ನಡ: ಮಂಕಿ ಪಟ್ಟಣ ಪಂಚಾಯತ್‌ಗೆ ಸಾರ್ವತ್ರಿಕ ಚುನಾವಣೆ

1
7

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊಸದಾಗಿ ರಚನೆಯಾಗಿರುವ ಮಂಕಿ ಪಟ್ಟಣ ಪಂಚಾಯತಿಯ 20 ವಾರ್ಡ್‌ಗಳಿಗೆ ಸಾರ್ವತ್ರಿಕ ಚುನಾವಣೆ ಜರುಗಿಸುವ ಕುರಿತು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಡಿಸೆಂಬರ್ 2ರಂದು ಚುನಾವಣಾ ಅಧಿಸೂಚನೆ ಹೊರಡಿಸಿದ್ದು, ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್ 9 ಕೊನೆಯ ದಿನವಾಗಿದೆ. ಡಿಸೆಂಬರ್ 10 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿಸೆಂಬರ್ 12 ಕೊನೆಯ ದಿನವಾಗಿದೆ.

ಅವಶ್ಯವಿದ್ದರೆ ಡಿಸೆಂಬರ್ 21 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 25ರಂದು ತಾಲೂಕಿನ ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous articleಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್ ನಿಧನ
Next articleಬ್ರೇಕ್​ಫಾಸ್ಟ್ ಮೀಟಿಂಗ್: ಡಿಕೆಶಿ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ

1 COMMENT

LEAVE A REPLY

Please enter your comment!
Please enter your name here