ಬೆಳಗಾವಿ (ಸುವರ್ಣಸೌಧ): ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಸುವರ್ಣಸೌಧದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸುತ್ತ 2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ಶುಲ್ಕ ಸಂಗ್ರಹಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣ, ಗೌಪ್ಯತಾ ಬಂಡಲುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮುಗಿದ ನಂತರ ಗೌಪ್ಯತಾ ಬಂಡಲುಗಳನ್ನು ಪ್ರಾಧಿಕಾರಕ್ಕೆ ತೆಗೆದುಕೊಂಡು ಬರುವುದು, ಪರೀಕ್ಷಾ ಕಾರ್ಯಗಳಲ್ಲಿ ನಿರತರಾಗುವ ಅಧಿಕಾರಿ, ಸಿಬ್ಬಂದಿಗೆ ಗೌರವಧನ ಭರಿಸುವುದು ಮುಂತಾದ ಎಲ್ಲಾ ವೆಚ್ಚಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಭರಿಸುತ್ತದೆ.
ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿನ ಪಾರದರ್ಶಕವಾಗಿ ನಡೆಸಲು ಆಧುನಿಕ ತಂತ್ರಜ್ಞಾನ ಬಳಕೆ ಮಾಡುವುದು ಅನಿವಾರ್ಯವಾಗಿದ್ದು, ಅರ್ಜಿಗೆ ನಿಗದಿಪಡಿಸಿರುವ ಅರ್ಜಿ ಶುಲ್ಕದಲ್ಲಿ ಎಲ್ಲಾ ವೆಚ್ಚಗಳನ್ನು ನಿಭಾಯಿಸುವುದು ಕಷ್ಟಸಾಧ್ಯವಾಗುತ್ತಿದೆ. ಅಭ್ಯರ್ಥಿಗಳಿಗೆ ಹೆಚ್ಚಿನ ಆರ್ಥಿಕ ಹೊರೆಯಿಲ್ಲದೆ ಪ್ರಾಧಿಕಾರವು ಪರೀಕ್ಷೆಯನ್ನು ನಡೆಸಲು ಕನಿಷ್ಠ ಮೊತ್ತವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳಿಂದ ನಿಗದಿಪಡಿಸಿರುವ ಶುಲ್ಕ ಪಡೆಯುವುದು ಅನಿವಾರ್ಯವಾಗಿರುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಯಾವುದೇ ಆರ್ಥಿಕ ಲಾಭ ಇರುವುದಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2022ನೇ ವರ್ಷದಿಂದ ಇಷ್ಟೇ ನಿಗದಿ ಶುಲ್ಕವನ್ನು ವಿಧಿಸುತ್ತಿದ್ದು, ಪರೀಕ್ಷೆ ನಡೆಸುವ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾದರೂ ಸಹ ಬಡ ಹಾಗೂ ಗ್ರಾಮೀಣ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಶುಲ್ಕವನ್ನು ಹೆಚ್ಚಿಸಿರುವುದಿಲ್ಲ ಹಾಗೂ ಆರ್ಥಿಕ ಹೊರ ತಪ್ಪಿಸಲು ಒಂದೇ ಪಠ್ಯಕ್ರಮವಿರುವ ವಿವಿಧ ಇಲಾಖೆಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರೆ ಮೊದಲ ಹುದ್ದೆಗೆ ಮಾತ್ರ ಅವರಿಗೆ ಅನ್ವಯಿಸುವ ಪೂರ್ಣ ಅರ್ಜಿ ಶುಲ್ಕ ಪಾವತಿಸಲು ಹಾಗೂ ಹೆಚ್ಚುವರಿ ಹುದ್ದೆಗೆ ಕೇವಲ ರೂ.100 ವಿಧಿಸಲಾಗುತ್ತಿದೆ.
ರಾಜ್ಯ ಸರ್ಕಾರದಿಂದ ಯಾವುದೇ ಅನುದಾನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡಲಾಗುತ್ತಿಲ್ಲ. ಆದ್ದರಿಂದ, ಕೇಂದ್ರ / ರಾಜ್ಯ ಲೋಕ ಸೇವಾ ಆಯೋಗದ ಮಾದರಿಯಲ್ಲಿ ಶುಲ್ಕ ವಿಧಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.










99wingame, man, it’s alright. Nothing crazy, but keeps me entertained during my commute. Give it a whirl if you’re bored. Check it out: 99wingame