ಹಣಕ್ಕಾಗಿ ಅನಗತ್ಯ ಸಿಸೇರಿಯನ್ ಹೆರಿಗೆ: ಆಸ್ಪತ್ರೆಗಳ ವಿರುದ್ಧ ಕ್ರಮ

0
121

ಬೆಳಗಾವಿ (ಸುವರ್ಣಸೌಧ): ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುವರ್ಣಸೌಧದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆರೋಗ್ಯ ಸಚಿವರು ಉತ್ತರಿಸುತ್ತ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ ಹಾಗೂ ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಈ ಬಗ್ಗೆ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ.

ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆಪಿಎಂಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು.

ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು ,ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ, ಅಧಿನಿಯಮದ ಸೆಕ್ಷನ್15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು.

Previous articleಸುಪ್ರಸಿದ್ಧ ಜಪಾನೀ ಆರ್ಕಿಟೆಕ್ಟ್ ಅಕೀಹೀಸ ಹಿರಾಟಾ ಅವರೊಡನೆ, ಬೆಂಗಳೂರಿನಲ್ಲಿ ಆರ್ಕಿಟೆಕ್ಟ್ ಸಂವಾದ ನಡೆಸಿಕೊಟ್ಟ ಟೋಟೋ ಇಂಡಿಯಾ
Next articleಮುಸ್ಲಿಮರ ಒತ್ತಡಕ್ಕೆ ಸಿದ್ದರಾಮಯ್ಯ ಮಣಿಯುತ್ತಿದ್ದಾರೆ

LEAVE A REPLY

Please enter your comment!
Please enter your name here