ಬೆಂಗಳೂರು: ರಾಜ್ಯದ ವಿವಿಧ ಪಟ್ಟಣ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 21, 2025ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಬಿಜೆಪಿ ಸಂಘಟನೆ ರಾಜಕೀಯ ಚಟುವಟಿಕೆಗಳನ್ನು ಗಟ್ಟಿಗೊಳಿಸಿದೆ. ಈ ಸಂಬಂಧ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಪಕ್ಷದ ಪರವಾಗಿ ಸ್ಥಳೀಯ ಸಂಸ್ಥೆಗಳಿಗೆ ವಿಶೇಷ ಪ್ರಭಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಯಾರಿಗೆ ಯಾವ ಜವಾಬ್ದಾರಿ?: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತಗಳಿಗೆ ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿಯನ್ನು ಹಾಗೂ ಉತ್ತರ ಕನ್ನಡ ಜಿಲ್ಲೆಯ ಮಂಕಿ ಪಟ್ಟಣ ಪಂಚಾಯಿತಗೆ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರನ್ನ ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿ ಮುನಿರಾಜು ಅವರನ್ನು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಗೆ ಪ್ರಭಾರಿಗಳನ್ನಾಗಿ ನೇಮಿಸಿ ಪ್ರಕಟಣೆ ಹೊರಡಿಸಿದ್ದಾರೆ.
ಚುನಾವಣಾ ಕಣಕ್ಕಿಳಿದ ಬಿಜೆಪಿ: ಚುನಾವಣೆ ಪ್ರಕಟಣೆ ಹೊರಬಿದ್ದಂತೆಯೇ ಸ್ಥಳೀಯ ಮಟ್ಟದಲ್ಲಿ ಅಭ್ಯರ್ಥಿ ಆಯ್ಕೆ, ಮತದಾರ ಸಂಪರ್ಕ ಹಾಗೂ ಪ್ರಚಾರ ತಂತ್ರ ರೂಪಿಸುವ ಕೆಲಸಕ್ಕೆ ವೇಗ ಸಿಕ್ಕಿದೆ. ವಿಜಯೇಂದ್ರ ಅವರ ಆಯ್ಕೆ ಕ್ರಮವು ಗ್ರಾಮ – ಪಟ್ಟಣ ಮಟ್ಟದಲ್ಲಿ ಸಂಘಟನೆ ಬಲಪಡಿಸುವುದು ಮತ್ತು ಬೂತ್ ವ್ಯವಸ್ಥೆಯನ್ನು ಮತ್ತಷ್ಟು ಕಠಿಣಗೊಳಿಸುವುದು ಎನ್ನುವುದು ಪಕ್ಷದ ಮೂಲ ಉದ್ದೇಶ ಎಂದು ಹೇಳಲಾಗಿದೆ.









