Home Advertisement
Home ಸುದ್ದಿ ದೇಶ ಅಧಿವೇಶನ ಇದ್ದಾಗಲೆಲ್ಲ ರಾಹುಲ್ ವಿದೇಶದಲ್ಲೇ ಇರ್ತಾರೆ

ಅಧಿವೇಶನ ಇದ್ದಾಗಲೆಲ್ಲ ರಾಹುಲ್ ವಿದೇಶದಲ್ಲೇ ಇರ್ತಾರೆ

0
18

ನವದೆಹಲಿ: “ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಸಂಸತ್ ಅಧಿವೇಶನ ಇದ್ದಾಗಲೆಲ್ಲ ಹೆಚ್ಚು ಕಾಲ ವಿದೇಶದಲ್ಲೇ ಇರುತ್ತಾರೆ” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿ ವಿದೇಶ ಪ್ರವಾಸ ಬಗ್ಗೆ ತಗಾದೆ ತೆಗೆಯುತ್ತಿರುವ ಕಾಂಗ್ರೆಸ್ ನಾಯಕರ ಆರೋಪಕ್ಕೆ ತುಸು ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ ಜೋಶಿ, ರಾಹುಲ್ ಗಾಂಧಿ ಸಂಸತ್ ಅಧಿವೇಶನ ನಡೆಯುತ್ತಿರುವಾಗಲೇ ಏಕೆ ಹೆಚ್ಚು ಸಮಯ ವಿದೇಶ ಪ್ರವಾಸ ಕೈಗೊಳ್ಳುತ್ತಾರೆ? ಎಂದು ತರಾಟೆಗೆ ತೆಗೆದುಕೊಂಡರು.

ಸಂಸತ್ ಅಧಿವೇಶನ ನಡೆಯುತ್ತಿರುವಾಗ‌ ರಾಹುಲ್ ಗಾಂಧಿ ಹೆಚ್ಚಾಗಿ ವಿದೇಶದಲ್ಲಿಯೇ ಇರುತ್ತಾರೆ. ಬಳಿಕ “ಸಂಸತ್ತಿನಲ್ಲಿ ತಮಗೆ ಮಾತನಾಡಲು ಅವಕಾಶವೇ ಸಿಗಲಿಲ್ಲ” ಎಂಬ ವೃಥಾ ಆರೋಪ ಮಾಡುತ್ತಾರೆ ಎಂದು ಟೀಕಿಸಿದರು.

ವಾಸ್ತವದಲ್ಲಿ ರಾಹುಲ್ ಗಾಂಧಿ ಸಂಸತ್ ಅಧಿವೇಶನಕ್ಕೆ ಆಗಾಗ್ಗೆ ಗೈರಾಗುತ್ತಲೇ ಇರುತ್ತಾರೆ. ಅವರೊಬ್ಬ “ಅರೆಕಾಲಿಕ ಮತ್ತು ಬೇಜವಾಬ್ದಾರಿ ರಾಜಕೀಯ ನಾಯಕರು. ವಿಪಕ್ಷ ನಾಯಕನ ಸ್ಥಾನದಲ್ಲಿದ್ದು ಸ್ವಲ್ಪವೂ ಗಂಭೀರತೆಯೇ ಇಲ್ಲದ ರಾಜಕಾರಣಿ ಎಂದು ಜೋಶಿ ಪ್ರತ್ಯಾರೋಪ ಮಾಡಿದರು.

ಸೋತಾಗೊಂದು, ಗೆದ್ದಾಗೊಂದು: ಕಾಂಗ್ರೆಸ್ ಸೋತಾಗ EVM ಮತ್ತು ಚುನಾವಣಾ ಆಯೋಗವನ್ನು ದೂಷಿಸುತ್ತದೆ. ಗೆಲುವಾದಾಗ ಬೇರೆಯದ್ದೇ ಪ್ರತಿಕ್ರಿಯೆ ನೀಡುತ್ತದೆ. ಹೀಗೆ ಸೋತಾಗೊಂದು, ಗೆದ್ದಾಗೊಂದು ಭಿನ್ನ ವಿಭಿನ್ನ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಹರಿಹಾಯ್ದರು.

Previous articleಲಾರಿ-ಟ್ಯಾಂಕರ್ ಡಿಕ್ಕಿ: ಸ್ಥಳದಲ್ಲಿಯೇ ಮೂವರು ಸಾವು
Next articleಚಿನ್ನಸ್ವಾಮಿಯಲ್ಲೇ ಕ್ರಿಕೆಟ್, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ