ಹುಬ್ಬಳ್ಳಿ: ಬೌದ್ಧ ಧರ್ಮಗುರು ದಲೈ ಲಾಮಾ ಅವರು ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರವಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ. ಅವರು ಸ್ವಾಗತಿಸಿದರು.
ನಂತರ ಧರ್ಮಗುರು ದಲೈ ಲಾಮಾ ಅವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಟಿಬೇಟಿಯನ್ ಕ್ಯಾಂಪ್‌ಗೆ ತೆರಳಿದರು. ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಡಿಸಿಪಿ ಮಾಹಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಶಹರ ತಹಶೀಲ್ದಾರ್ ಮಹೇಶ ಗಸ್ತಿ, ಕಂದಾಯ ನಿರೀಕ್ಷಕ ರವಿ ಬೆನ್ನೂರ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಅಲ್ಲದೇ ಟಿಬೇಟಿಯನ್ ಕ್ಯಾಂಪಿನ ಅವರ ಅನುಯಾಯಿಗಳು, ಅಭಿಮಾನಿಗಳು ವಿಮಾನ ನಿಲ್ದಾಣಕ್ಕೆ ಸ್ವಾಗತಿಸಿದರು.
ಇದನ್ನೂ ಓದಿ: ಡಿಸಿ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ
ಡ್ರೆಪುಂಗ್ ಗೋಮಾಂಗ್ ಬೌದ್ಧ ಮಂದಿರದಲ್ಲಿ 45 ದಿನ ವಾಸ್ತವ್ಯ ದಲೈ ಲಾಮಾ ಅವರು ಮುಂಡಗೋಡ ಟಿಬೇಟಿಯನ್ ಕ್ಯಾಂಪ್‌ನಲ್ಲಿರುವ ಡ್ರೆಪುಂಗ್ ಗೋಮಾಂಗ್ ಬೌದ್ಧ ಮಂದಿರದಲ್ಲಿ 45 ದಿನ ವಾಸ್ತವ್ಯ ಮಾಡಲಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಸುದೀರ್ಘ ಅವಧಿಗೆ ವಾಸ್ತವ್ಯ ಮಾಡುತ್ತಿದ್ದಾರೆ.























