ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತರುವ ಪ್ರಯತ್ನ ನಡೆದಿತ್ತು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದಲ್ಲಿದ್ದರೆ ಅದು ಸಾಧ್ಯವಿಲ್ಲ ಎಂದು ನನ್ನನ್ನ ಪಕ್ಷದಿಂದ ಉಚ್ಛಾಟನೆ ಮಾಡಿದಾಗ ಡಿ.ಕೆ. ಶಿವಕುಮಾರ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ಮಾಡಲಾಗಿತ್ತು. ಆದರೆ, ಹೈಕಮಾಂಡ್ ತಿರಸ್ಕರಿಸಿತು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಡಿ.ಕೆ. ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಿ ವಿಜಯೇಂದ್ರ ಡಿಸಿಎಂ ಆಗುವ ಕನಸು ಕಂಡಿದ್ದ ಇದಕ್ಕಾಗಿ ಕೇಂದ್ರ ಸಚಿವ ಅಮಿತ್ ಶಾ ಬಳಿ ಕರೆದುಕೊಂಡು ಹೋಗಿದ್ದರು. ಆದರೆ ಅಮಿತ್ ಒಪ್ಪಲಿಲ್ಲ. ಈ ಮಾಹಿತಿಯನ್ನು ಬಿಜೆಪಿಯವರೇ ನನಗೆ ಹೇಳಿದ್ದರು ಎಂದು ಯತ್ನಾಳ ತಿಳಿಸಿದರು.






















