ಶಿವಮೊಗ್ಗ : ಬೆಳಂ ಬೆಳ್ಳಗ್ಗೆ ಲೋಕಾಯುಕ್ತ ದಾಳಿ

0
7

ಶಿವಮೊಗ್ಗ: ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ವಿರುದ್ಧ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಗ್ಗೆಯೇ ಏಕಕಾಲಕ್ಕೆ ಹಲವು ಕಡೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗ ನಗರದ ಬಸವನಗುಡಿ ಪ್ರದೇಶದಲ್ಲಿರುವ ರೂಪ್ಲಾ ನಾಯ್ಕ್ ಅವರ ಬಾಡಿಗೆ ನಿವಾಸ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಚೇರಿಗೆ ಲೋಕಾಯುಕ್ತ ತಂಡಗಳು ದಾಳಿ ನಡೆಸಿ ಸುದೀರ್ಘ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳು ದಾಖಲೆಗಳು, ಬ್ಯಾಂಕ್ ಖಾತೆಗಳು, ಆಸ್ತಿ ದಾಖಲೆಗಳು ಸೇರಿದಂತೆ ವಿವಿಧ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: ಗಾಯಕ ಮ್ಯೂಸಿಕ್ ಮೈಲಾರಿ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್..!

ಇದರ ಜೊತೆಗೆ, ರೂಪ್ಲಾ ನಾಯ್ಕ್ ಅವರ ಕುಟುಂಬ ನೆಲೆಸಿರುವ ಬೆಂಗಳೂರಿನ ನಿವಾಸದ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಅಲ್ಲಿ ಕೂಡ ಆಸ್ತಿ ಸಂಬಂಧಿತ ದಾಖಲೆಗಳ ಶೋಧ ಕಾರ್ಯ ಮುಂದುವರಿದಿದೆ. ಅಲ್ಲದೆ, ರೂಪ್ಲಾ ನಾಯ್ಕ್ ಅವರ ಸಹಾಯಕ ತಾಂಬೆ ಅವರ ವಿದ್ಯಾನಗರದಲ್ಲಿರುವ ಮನೆಗೂ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಒಟ್ಟು ಆರು ಪ್ರತ್ಯೇಕ ಲೋಕಾಯುಕ್ತ ತಂಡಗಳಾಗಿ ಈ ದಾಳಿಗಳನ್ನು ಸಂಯೋಜಿತವಾಗಿ ನಡೆಸಲಾಗುತ್ತಿದ್ದು, ಅಕ್ರಮ ಆಸ್ತಿ ಸಂಗ್ರಹಣೆ ಹಾಗೂ ಆದಾಯಕ್ಕಿಂತ ಹೆಚ್ಚಾದ ಆಸ್ತಿಗಳ ಬಗ್ಗೆ ಸಾಕ್ಷ್ಯ ಸಂಗ್ರಹ ಕಾರ್ಯ ನಡೆಯುತ್ತಿದೆ. ಪರಿಶೀಲನೆ ಇನ್ನೂ ಮುಂದುವರಿದಿದ್ದು, ದಾಳಿಯ ಅಂತಿಮ ವರದಿ ಹೊರಬಂದ ಬಳಿಕ ಹೆಚ್ಚಿನ ವಿವರಗಳು ಲಭ್ಯವಾಗುವ ಸಾಧ್ಯತೆ ಇದೆ.

Previous articleಕೊಪ್ಪಳ : ಬಸ್ -ಟ್ರ್ಯಾಕ್ಟರ್ ಢಿಕ್ಕಿ – ಒರ್ವ ಸಾವು, 15 ಜನರಿಗೆ ಗಾಯ