Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

0
39

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಕಳುಹಿಸುವಂತೆ ಆದೇಶ

ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಹೋರಾಟದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರಿಗೆ ಮಾಡಿ ಆದೇಶ ಹೊರಡಿಸಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರಿಗೆ ಮಾಡುವಂತೆ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಯಾಕೆ ಗಡಿಪಾರು ಮಾಡಬಾರದು ಎಂಬ ಕುರಿತು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಕಾರಣ ಕೇಳಿ ನೋಟಿಸ್ (Show Cause Notice) ನೀಡಿದ್ದರು. ಈ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ, ಡಿಸೆಂಬರ್ 7 ರಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ತಮ್ಮ ವಕೀಲರ ಮೂಲಕ ಆಕ್ಷೇಪಣೆ ಸಲ್ಲಿಸಿದ್ದರು.

ಇದನ್ನೂ ಓದಿ: ಪೋಕ್ಸೋ ಕೇಸ್: ಮ್ಯೂಸಿಕ್ ಮೈಲಾರಿ 14 ದಿನ ನ್ಯಾಯಾಂಗ ವಶಕ್ಕೆ

ವಾದ–ಪ್ರತಿವಾದದ ಬಳಿಕ ಗಡಿಪಾರಿಗೆ ಆದೇಶ: ಪುತ್ತೂರು ಸಹಾಯಕ ಆಯುಕ್ತರ ಮುಂದೆ ನಡೆದ ವಿಚಾರಣೆಯಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು ಗಡಿಪಾರಿಗೆ ನೋಟಿಸ್ ವಿರುದ್ದ ತಮ್ಮ ವಾದವನ್ನು ಮಂಡಿಸಿದ್ದರು. ಇಬ್ಬರ ವಾದ–ಪ್ರತಿವಾದಗಳನ್ನು ಆಲಿಸಿದ ಬಳಿಕ, ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಇದೀಗ ಮತ್ತೆ ಗಡಿಪಾರಿಗೆ ಆದೇಶವನ್ನು ದೃಢಪಡಿಸಿದ್ದಾರೆ.

ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರಿ ಮಾಡುವುದಕ್ಕೆ ಸಂಬಂಧಿಸಿದಂತೆ ಸೂಕ್ತ ಕಾರಣಗಳೊಂದಿಗೆ ವರದಿ ಸಲ್ಲಿಸಿದ್ದರು. ಪೊಲೀಸ್ ವರದಿಯನ್ನು ಆಧಾರವಾಗಿಸಿಕೊಂಡು ಸಹಾಯಕ ಆಯುಕ್ತರು ಗಡಿಪಾರಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ವಲಸೆ ಹಕ್ಕಿಯಲ್ಲಿ ಚೀನಾದ ಜಿಪಿಎಸ್ ಟ್ರ‍್ಯಾಕರ್

ನೋಟಿಸ್ ಜಾರಿಗೆ ಪೊಲೀಸರು ಮುಂದಾಗಿದ್ದರೂ ತಿಮರೋಡಿ ಮನೆಯಲ್ಲಿ ಇರಲಿಲ್ಲ: ಗಡಿಪಾರು ಆದೇಶದ ಪ್ರತಿಯನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ರವಾನಿಸಲಾಗಿದ್ದು, ಡಿಸೆಂಬರ್ 18 ರಂದು ಬೆಳ್ತಂಗಡಿ ಪೊಲೀಸರು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸಕ್ಕೆ ತೆರಳಿ ನೋಟಿಸ್ ಜಾರಿ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ ಎಂದು ತಿಳಿದುಬಂದಿದೆ.