ದಾವಣಗೆರೆ: ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನ ನೀಡುತ್ತಿದ್ದ ಬಿಸಿಯೂಟದಲ್ಲಿ ಹುಳುಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾರಿ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಬನ್ನಿಹಟ್ಟಿಯ ಸರ್ಕಾರಿ ಶಾಲೆಯ ಶಿವು ನಾಯ್ಕ್ ಅಮಾನತುಗೊಂಡ ಮುಖ್ಯ ಶಿಕ್ಷಕ. ಚಿಕ್ಕಬನ್ನಿಹಟ್ಟಿಯ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಕಳೆದ ಡಿ. 14ರಂದು ಹುಳುಗಳು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಪೋಷಕರು ಶಾಲೆಗೆ ಭೇಟಿ ನೀಡಿ ಅಡುಗೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.
ಇದನ್ನೂ ಓದಿ: “5 ವರ್ಷ ನಾನೇ ಬಾಸ್..!” ಕುರ್ಚಿ ಕದನದ ಗೊಂದಲಕ್ಕೆ ಸಿದ್ದರಾಮಯ್ಯ ಫುಲ್ ಸ್ಟಾಪ್
ಆಹಾರ ಧಾನ್ಯಗಳನ್ನು ಸ್ವಚ್ಛಗೊಳಿಸದೆ ನಿರ್ಲಕ್ಷ್ಯ ವಹಿಸಿ ಅಡುಗೆ ಸಿಬ್ಬಂದಿ ಅಡುಗೆ ಮಾಡುತ್ತಿರುವುದರಿಂದ ತಮ್ಮ ಮಕ್ಕಳ ಆರೋಗ್ಯದ ಸ್ಥಿತಿ ಏನಾಗಬಹುದೆಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕನನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.









