ದೇವಿ ಸನ್ನಿಧಿಯಲ್ಲಿ ಹೈಕಮಾಂಡ್ ಒಪ್ಪಂದದ ಗುಟ್ಟು ಬಿಚ್ಚಿಟ್ಟ ಡಿಸಿಎಂ

0
1

ಕಾರವಾರ: “ನಮ್ಮಲ್ಲಿ ಒಪ್ಪಂದವಾಗಿದೆ, ಅದರಂತೆ ನಡೆದುಕೊಳ್ಳುತ್ತೇನೆ. ಹೈಕಮಾಂಡ್ ಸಿಎಂ ಪರವಾಗಿದ್ದಕ್ಕೆ ಅವರು ಮುಖ್ಯಮಂತ್ರಿಯಾಗಿದ್ದಾರೆ,” ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ರಾಜಕೀಯದ ಅಧಿಕಾರ ಹಂಚಿಕೆಯ ಕುರಿತು ಮತ್ತೊಮ್ಮೆ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದ ಶ್ರೀ ಜಗದೀಶ್ವರಿ ಅಮ್ಮನವರ ಸನ್ನಿಧಿಗೆ ಭೇಟಿ ನೀಡಿದ ಅವರು, ದೀರ್ಘಕಾಲ ವಿಶೇಷ ಪೂಜೆ ಹಾಗೂ ಪ್ರಶ್ನಾಕಾರ್ಯ ನಡೆಸಿದರು.

ಇದನ್ನೂ ಓದಿ: “5 ವರ್ಷ ನಾನೇ ಬಾಸ್..!” ಕುರ್ಚಿ ಕದನದ ಗೊಂದಲಕ್ಕೆ ಸಿದ್ದರಾಮಯ್ಯ ಫುಲ್ ಸ್ಟಾಪ್

ಸಿಎಂ ಸಿದ್ದರಾಮಯ್ಯ ಅವರು “ನಾನೇ ಐದು ವರ್ಷ ಸಿಎಂ” ಎಂದು ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, “ನಾನು ಯಾವತ್ತೂ ಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿ ಇರಲ್ಲ ಎಂದು ಹೇಳಿಲ್ಲ. ಹೈಕಮಾಂಡ್ ಏನು ನಿರ್ಧಾರ ಮಾಡಿದೆಯೋ ಅದರಂತೆ ಅವರು ಸಿಎಂ ಆಗಿದ್ದಾರೆ. ನಮ್ಮಿಬ್ಬರ ನಡುವೆ ಒಂದು ಒಪ್ಪಂದವಾಗಿದೆ, ಹೈಕಮಾಂಡ್ ಸಹ ನಮ್ಮನ್ನು ಆ ಒಪ್ಪಂದಕ್ಕೆ ತಂದಿದೆ. ಅದರಂತೆ ನಾನು ನಡೆದುಕೊಳ್ಳುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಉದ್ಯೋಗ ಖಾತ್ರಿ ಯೋಜನೆ ತಿದ್ದುಪಡಿ ಘೋರ ಅಪರಾಧ

ಇದೇ ವೇಳೆ, ಸಿಎಂ ಸ್ಥಾನದ ಬದಲಾವಣೆಗೆ ದಿನಾಂಕ ನಿಗದಿಯಾಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡದ ಡಿಕೆಶಿ, ಕೇವಲ ಮುಗುಳುನಗೆ ಬೀರಿ ಅಲ್ಲಿಂದ ಹೊರಟರು. ಇದು ರಾಜಕೀಯ ವಲಯದಲ್ಲಿ ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿದೆ.

Previous articleಉದ್ಯೋಗ ಖಾತ್ರಿ ಯೋಜನೆ ತಿದ್ದುಪಡಿ ಘೋರ ಅಪರಾಧ