Home ನಮ್ಮ ಜಿಲ್ಲೆ ಬೆಳಗಾವಿ ಪೋಕ್ಸೊ ಪ್ರಕರಣದ ಆರೋಪಿಗಳಿಗೆ ರಕ್ಷಣೆ: ಮಾಜಿ ಶಾಸಕ ಆರೋಪ

ಪೋಕ್ಸೊ ಪ್ರಕರಣದ ಆರೋಪಿಗಳಿಗೆ ರಕ್ಷಣೆ: ಮಾಜಿ ಶಾಸಕ ಆರೋಪ

0
50

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ, ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ರಕ್ಷಣೆ ನೀಡಲಾಗುತ್ತಿದೆ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ್ ಮಂಗಳವಾರ ಆರೋಪಿಸಿದ್ದಾರೆ.

ಬೆಳಗಾವಿ ತಾಲೂಕಿನ ಗ್ರಾಮದಲ್ಲಿ ಇತ್ತೀಚಿನ ಘಟನೆಯನ್ನು ಉಲ್ಲೇಖಿಸಿದ ಅವರು, ಹೈಸ್ಕೂಲ್ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಎದುರಿಸುತ್ತಿರುವ ಮುಖ್ಯೋಪಾಧ್ಯಾಯನನ್ನು ಪ್ರಕರಣದ ಗಂಭೀರತೆ ಇದ್ದರೂ ಠಾಣಾ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ವಿಜಯ್ ಹಜಾರೆ ನಾಳೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಸ್ಥಳಾಂತರ

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಅತ್ಯಂತ ಗಂಭೀರ ಪ್ರಕರಣವಾಗಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಮತ್ತು ಆಡಿಯೋ ಕ್ಲಿಪ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ, ಪೊಲೀಸರು ಕೇಳಿದರೆ ಅವುಗಳನ್ನು ನೀಡಲು ನಾನು ಸಿದ್ಧನಿದ್ದೇನೆ ಎಂದರು.

ಇದಲ್ಲದೆ, ಘಟನೆ ಬಗ್ಗೆ ಮಾತನಾಡದಂತೆ ಪೀಡಿತ ಕುಟುಂಬಕ್ಕೆ ಬೆದರಿಕೆ ಹಾಕಲಾಗಿದೆ ಎಂಬ ಮಾಹಿತಿಯೂ ತಮ್ಮ ಬಳಿ ಇದೆ ಎಂದು ಅವರು ಹೇಳಿದರು. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಬೇಕು. ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರು ಸಾರ್ವಜನಿಕರಿಗೆ ಉತ್ತರದಾಯಕರಾಗಿರುವುದರಿಂದ ಸ್ಪಷ್ಟ ನಿಲುವು ತಾಳಬೇಕು. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಈ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು.