ನನ್ನ ಆ ಮಾತು ಯಾರಿಗೆ ಅರ್ಥ ಆಗಬೇಕೋ ಅವರಿಗೆ ಆಗಿದೆ

0
2

ಬೆಂಗಳೂರು: `ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಸುದೀಪ್ ಹುಬ್ಬಳ್ಳಿಯಲ್ಲಿ ಹೇಳಿದ್ದರು. ಆ ನಂತರ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದರು. ಆ ಘಟನೆ ಕುರಿತು ಸುದೀಪ್, ತಾವು ಮಾತನಾಡಿದ್ದು ಪೈರಸಿ ಬಗ್ಗೆ ಎಂದು ಹೇಳಿದ್ದಾರೆ.

ನಾನು ಆ ವೇದಿಕೆಯಲ್ಲಿ ಪೈರಸಿ ಎಂಬ ಪದ ಬಳಕೆ ಮಾಡಿಲ್ಲ. ಹಾಗಾದರೆ ಇಡೀ ಚಿತ್ರರಂಗ ರಿಯಾಕ್ಟ್ ಮಾಡಬೇಕಿತ್ತಲ್ಲ. ಮೊದಲು45′ ಚಿತ್ರತಂಡದವರು ರಿಯಾಕ್ಟ್ ಮಾಡಬೇಕಿತ್ತು. ಉಪ್ಪಿ ಸರ್, ಧ್ರುವ ಸರ್ಜಾ, ರಕ್ಷಿತ್ ಶೆಟ್ಟಿ, ಗಣೇಶ್, ರಿಷಬ್ ಶೆಟ್ಟಿ, ಯಶ್ ಮುಂತಾದವರೆಲ್ಲ ರಿಯಾಕ್ಟ್ ಮಾಡಬೇಕಿತ್ತು. ನಾನು ಹೇಳಿಕೆ ನೀಡಿದೆ. ಎಲ್ಲಿಂದ ಸೌಂಡು ಬರುತ್ತದೆ ಅಂತ ನೋಡಿದೆ ಎಂದರು.

ಚಿತ್ರರಂಗದಲ್ಲಿ ಒಂದು ಲಕ್ಷ ಜನರು ಇದ್ದಾರೆ. ಯಾರೂ ನನ್ನ ಮಾತಿಗೆ ಪ್ರತಿಕ್ರಿಯೆ ನೀಡಿಲ್ಲ. ಪ್ರತಿಕ್ರಿಯೆ ನೀಡಿದವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಬಾರದು. ಅಂದು ನಾನು ಅಲ್ಲಿ ಮಾತನಾಡುವುದಕ್ಕೂ ಮುನ್ನ ನನಗೆ ಒಂದು ಫೋನ್ ಕರೆ ಬಂದಿತ್ತು. ನಿಮ್ಮ ಸಿನಿಮಾವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ಪೈರಸಿ ಮಾಡಲಿದ್ದಾರೆ ಎಂಬ ಮಾಹಿತಿ ಬಂತು. ಅದರ ವಿರುದ್ಧ ನಾನು ನಿಂತುಕೊಳ್ಳದೇ ಮತ್ತೆ ಯಾರು ಬರಬೇಕು? ಅಂದು ನಾನು ನನ್ನ ಸಂಭ್ರಮವನ್ನು ನಿಲ್ಲಿಸಿ, ಆ ಮಾತನ್ನು ಹೇಳಿದೆ ಎಂದರೆ ಅರ್ಥ ಮಾಡಿಕೊಳ್ಳಿ. ಯಾರು ಕೇಳಿಸಿಕೊಳ್ಳುತ್ತಿದ್ದಾರೋ ಅವರಿಗೆ ನಾನು ಆ ಮಾತನ್ನು ಹೇಳಬೇಕಿತ್ತು. ಅವರಿಗೆ ಅರ್ಥ ಆಗಿದೆ’ ಎಂದು ಹೇಳಿದರು.

`ಬೇರೆಯವರ ವಿಷಯದಲ್ಲಿ ತಲೆ ಹಾಕುವ ಉದ್ದೇಶ ನನಗೆ ಇಲ್ಲ. ಇಂಥವರಿಗೆ ಹೇಳಿದ್ದು ಅಂತ ನಾನು ಹೇಳಿಲ್ಲ. ಅಷ್ಟು ಜನ ಕಲಾವಿದರು ಇದ್ದಾರೆ. ಅವರು ಯಾರೂ ಕೂಡ ಪ್ರತಿಕ್ರಿಯಿಸಿಲ್ಲ. ಬೇರೆ ಯಾರದ್ದೋ ಮಾತಿಗೆ ನಾನು ಯಾಕೆ ಪ್ರತಿಕ್ರಿಯೆ ನೀಡಬೇಕು? ನನ್ನ ಹೆಸರು ಹೇಳಿ ಮಾತನಾಡಿದರೆ ನಾನು ಪ್ರತಿಕ್ರಿಯೆ ಕೊಡುತ್ತೇನೆ ಎಂದರು.

Previous articleಕೆಎಸ್‌ಆರ್‌ಟಿಸಿ ನಿಗಮದಲ್ಲಿ ಋತುಚಕ್ರ ರಜೆ ಜ. 1ರಿಂದ ಜಾರಿ