ಅಪಘಾತ: ಚಾಲಕನನ್ನೇ ಎಳೆದೊಯ್ದ ಬೈಕ್‌ ಸವಾರ

0
16
ರೋಡ ರಂಪಾಟ

ಟಾಟಾ ಸುಮೋಗೆ ಡಿಕ್ಕಿ ಹೊಡೆದ ಬೈಕ್‌ ಸವಾರನೊಬ್ಬ ಬೈಕ್ ಹತ್ತಿ ಎಸ್ಕೇಪ್ ಆಗಲು ಯತ್ನಿಸಿದಾಗ ಆತನ ಬೈಕ್‌ ಹಿಡಿದ ಟಾಟಾ ಸುಮೋ ಚಾಲಕನನ್ನೇ ರಸ್ತೆ ಮೇಲೆ ಎಳೆದುಕೊಂಡು ಹೋದ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ನಡೆದಿದೆ.
ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್​ ಸವಾರ ಟೋಲ್ ಗೇಟ್ ಬಳಿ ಟಾಟಾ ಸುಮೋಗೆ ಡಿಕ್ಕಿ ಹೊಡೆದಿದ್ದಾನೆ. ಆಗ ಟಾಟಾ ಸುಮೋ‌‌ ಡ್ರೈವರ್ ಪ್ರಶ್ನಿಸುತ್ತಿದ್ದಂತೆ ಬೈಕ್ ಹತ್ತಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಆಗ ಬೈಕ್‌ ಎಳೆದು ಹಿಡಿದಿದ್ದ ಟಾಟಾ ಸುಮೋ ಚಾಲಕನನ್ನು ಮಾಗಡಿ ರಸ್ತೆ ಟೋಲ್ ಗೇಟ್ ಬಳಿಯಿಂದ ಹೊಸಳ್ಳಿ ಮೆಟ್ರೋ ನಿಲ್ದಾಣದ ವರೆಗೆ ದರ ದರನೆ ಎಳೆದೊಯ್ದಿದ್ದಾನೆ. ವಯಸ್ಸಾದ ಚಾಲಕನನ್ನ ಬೈಕ್​ನಲ್ಲಿ ಎಳೆದೊಯ್ತುತ್ತಿರುವುದನ್ನು ಸಾರ್ವಜನಿಕರು ವಿಡಿಯೋ ಮಾಡಿದ್ದಾರೆ. ವಾಹನ ಸವಾರರು ಬೈಕ್ ಚಲಾಯಿಸುತ್ತಿದ್ದವರನ್ನು ಬೆನ್ನಟ್ಟಿ ಹಿಡಿದಿದ್ದಲ್ಲದೇ ಬೈಕ್ ಸವಾರನಿಗೆ ಹಿಗ್ಗಾ ಮುಗ್ಗ ತಳಿಸಿದ್ದಾರೆ.

Previous articleಕೊಹ್ಲಿ ಶತಕ – ಅಭಿಮಾನಿಗೆ ಮದುವೆ ಸಂಭ್ರಮ
Next articleಧಮ್‌ ಇದ್ರೆ ಮೋದಿ ಎದುರು ಮಾತಾಡಿ