ಚಿತ್ರದುರ್ಗ : ಹಿರಿಯೂರು ತಾಲ್ಲೂಕು ಜವಗೊಂಡನಹಳ್ಳಿ ಬಳಿ ಹೆದ್ದಾರಿಯಲ್ಲಿ ಗುರುವಾರ ಮುಂಜಾನೆ 3.30ಕ್ಕೆ ಅಫಘಾತದಲ್ಲಿ ಬಸ್ ಗೆ ಬೆಂಕಿ ಹತ್ತಿಕೊಂಡು ಅಂದಾಜು 18 ಮಂದಿ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಗೆ ಬೆಂಕಿ ಹತ್ತಿಕೊಂಡು, ಅಂದಾಜು 18 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೃತದೇಹಗಳು ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯುವ ಕಾರ್ಯ ಆಗಬೇಕಿದೆ. ಸ್ಥಳಕ್ಕೆ ಎಸ್ಪಿ, ಡಿವೈಎಸ್ಪಿ, ಜಿಲ್ಲಾಡಳಿತದ ಅಧಿಕಾರಿಗಳಿ ಭೇಟಿ ನೀಡಿ ಬಸ್, ಲಾರಿ ತೆರವು, ಮೃತದೇಹ ಆಸ್ಪತ್ರೆಗೆ ಸಾಗಿಸುವುದು, ಬದುಕುಳಿದವರಿಗೆ ಚಿಕಿತ್ಸೆ ಹೀಗೆ ವಿವಿಧ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.
ಬಸ್ನಲ್ಲಿ 29 ಮಂದಿ ಸಂಧ್ಯಾ, ಮಂಜುನಾಥ್, ದಿಲೀಪ್, ಶಶಾಂಕ್, ಬಿ.ಬಿಂಧು, ಪ್ರೀತೀಶ್ವರನ್, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್, ಜಿ.ನಂದಿತಾ, ಹೆಚ್.ದೇವಿಕಾ, ಮೇಘರಾಜ್, ಎಸ್.ಎನ್.ಮಸ್ರತ್ಉನ್ನೀಸಾ, ಸಯಿದ್ ಜಮೀರ್ ಗೌಸ್, ಎಸ್ಗಗನಶ್ರೀ, ರಶ್ಮಿ ಮಹಲೆ, ಆರ್.ರಕ್ಷಿತಾ ಪ್ರಯಾಣ ಮಾಡುತ್ತಿದ್ದವರು ಎಂಬ ಪ್ರಾಥಮಿಕ ದೊರೆತಿದೆ. ಮಾಹಿತಿ























