Bal Veer Award ಸ್ವೀಕರಿಸಿದ ವೈಭವ್ ಸೂರ್ಯವಂಶಿ

0
8

ನವದೆಹಲಿ: ನವದೆಹಲಿಯಲ್ಲಿ ಇಂದು ಆಯೋಜಿಸಲಾಗಿದ್ದ ವೀರ್ ಬಾಲ್ ದಿವಸ್ ಕಾರ್ಯಕ್ರಮದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಪ್ರದಾನ ಮಾಡಿದರು. ಈ ವರ್ಷ ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 20 ಪ್ರತಿಭಾವಂತ ಮಕ್ಕಳಿಗೆ ಈ ಗೌರವ ನೀಡಲಾಗಿದೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ಈ ಪ್ರಶಸ್ತಿಗಳು ಕೇವಲ ಪ್ರಶಸ್ತಿ ವಿಜೇತ ಮಕ್ಕಳನ್ನಷ್ಟೇ ಅಲ್ಲದೆ, ದೇಶಾದ್ಯಂತದ ಕೋಟ್ಯಂತರ ಮಕ್ಕಳಿಗೆ ಪ್ರೇರಣೆಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ಹೇಳಿದರು. ಬಾಲ ಪುರಸ್ಕಾರ ಪಡೆದ ಮಕ್ಕಳು ಶೌರ್ಯ, ಕಲೆ ಮತ್ತು ಸಂಸ್ಕೃತಿ, ಪರಿಸರ ಸಂರಕ್ಷಣೆ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗಳನ್ನು ಮಾಡಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: Train Fare: ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಈ ಸಂದರ್ಭದಲ್ಲಿ ವೀರ್ ಬಲ್ ದಿವಸ್‌ನ ಮಹತ್ವವನ್ನು ವಿವರಿಸಿದ ರಾಷ್ಟ್ರಪತಿ ಮುರ್ಮು, ಶ್ರೀ ಗುರು ಗೋವಿಂದ ಸಿಂಗ್ ಜಿ ಅವರ ಪುತ್ರರಾದ ಸಾಹಿಬ್‌ಜಾದಾ ಬಾಬಾ ಜೋರಾವರ್ ಸಿಂಗ್ ಜಿ ಮತ್ತು ಬಾಬಾ ಫತೇ ಸಿಂಗ್ ಜಿ ಅವರ ಹುತಾತ್ಮರ ಸ್ಮರಣಾರ್ಥವಾಗಿ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು. ಅವರ ಅಪ್ರತಿಮ ತ್ಯಾಗವು ಇಂದಿಗೂ ಪೀಳಿಗೆಯಿಂದ ಪೀಳಿಗೆಗೆ ಸ್ಪೂರ್ತಿಯಾಗಿ ಉಳಿದಿದೆ ಎಂದರು.

“ಒಂದು ದೇಶದ ಮಕ್ಕಳು ದೇಶಭಕ್ತಿ ಮತ್ತು ಉನ್ನತ ಆದರ್ಶಗಳಿಂದ ತುಂಬಿದ್ದರೆ, ಆ ರಾಷ್ಟ್ರದ ಭವಿಷ್ಯ ಹಾಗೂ ಮಾನವೀಯತೆ ಖಚಿತವಾಗುತ್ತದೆ” ಎಂದು ರಾಷ್ಟ್ರಪತಿ ಹೇಳಿದರು.

ಇದನ್ನೂ ಓದಿ: ರೈಲ್ವೆ ದರ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಜನಸಾಮಾನ್ಯರ ಮೇಲೆ ಹೊರೆ ಹಾಕಿದೆ

ಇದೇ ಸಂದರ್ಭದಲ್ಲಿ ಭಾರತದ ಉದಯೋನ್ಮುಖ ಬ್ಯಾಟಿಂಗ್ ತಾರೆ ವೈಭವ್ ಸೂರ್ಯವಂಶಿ ಅವರಿಗೆ ಸಹ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗೌರವಿಸಿದರು. ವಯೋಮಾನದ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಪರ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ರಾಜಸ್ಥಾನ ರಾಯಲ್ಸ್ (RR) ಪರ ನೀಡಿದ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ವೈಭವ್ ಸೂರ್ಯವಂಶಿ ಹಲವು ದಾಖಲೆಗಳನ್ನು ಮುರಿದಿದ್ದಾರೆ.

ಕಿರಿಯ ವಯಸ್ಸಿನಲ್ಲೇ ದೇಶೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿರುವ ವೈಭವ್ ಸೂರ್ಯವಂಶಿ, ಇಂದಿನ ಯುವ ಪೀಳಿಗೆಗೆ ಮಾದರಿಯಾಗಿ ಹೊರಹೊಮ್ಮಿದ್ದಾರೆ ಎಂದು ಕಾರ್ಯಕ್ರಮದಲ್ಲಿ ಪ್ರಶಂಸಿಸಲಾಯಿತು.

Previous articleಡಿಸಿಎಂ ಹೆಸರು ಹೇಳದೆ ಮಾತು ಆರಂಭಿಸಿದ ಸಿಎಂ ಸಿದ್ದರಾಮಯ್ಯ