ಈ ಗೆಲುವು, ಮುಂಬರುವ BMC ಚುನಾವಣೆಗೆ ಹೊಸ ಚೈತನ್ಯ ತುಂಬಿದೆ

0
10

ಬೆಂಗಳೂರು / ಮುಂಬೈ: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ನಗರ ಪಂಚಾಯತ್ ಹಾಗೂ ಮುನ್ಸಿಪಲ್ ಕೌನ್ಸಿಲ್ ಚುನಾವಣೆಗಳಲ್ಲಿ ಜನತಾ ದಳ (ಸೇಕ್ಯುಲರ್) ಪಕ್ಷದಿಂದ ಸ್ಪರ್ಧಿಸಿ ಕೌನ್ಸಿಲರ್‌ಗಳಾಗಿ ಆಯ್ಕೆಯಾದ ಐವರು ಅಭ್ಯರ್ಥಿಗಳಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಎಚ್‌.ಡಿ. ದೇವೇಗೌಡ ಅವರು ಮಹಾರಾಷ್ಟ್ರ ರಾಜ್ಯದಲ್ಲಿ ನಮ್ಮ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನಮ್ಮ ಅಭ್ಯರ್ಥಿಗಳಿಗೆ ಮತ ನೀಡಿ ಜಯಶೀಲರನ್ನಾಗಿಸಿದ ಪ್ರತಿಯೊಬ್ಬ ಮತದಾರರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Train Fare: ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ನಗರ ಪಂಚಾಯತ್ ಹಾಗೂ ಮುನ್ಸಿಪಲ್ ಕೌನ್ಸಿಲ್ ಚುನಾವಣೆಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸಾಧಿಸಿರುವ ಈ ಗೆಲುವು, ರಾಜ್ಯದಲ್ಲಿ ಪಕ್ಷದ ಬೇರುಗಳನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂಬರುವ ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಚುನಾವಣೆ – 2026 ಹಾಗೂ ಭವಿಷ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸುವ ನಿಟ್ಟಿನಲ್ಲಿ ಈ ಗೆಲುವು ಮುನ್ನುಡಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ರೈಲ್ವೆ ದರ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಜನಸಾಮಾನ್ಯರ ಮೇಲೆ ಹೊರೆ ಹಾಕಿದೆ

ಮಹಾರಾಷ್ಟ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಬಲಪಡಿಸುವ ಪ್ರಯತ್ನಗಳಿಗೆ ಈ ಫಲಿತಾಂಶ ಉತ್ತೇಜನ ನೀಡಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ರಾಜಕೀಯ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Previous articleಹ್ಯಾಟ್ರಿಕ್ ಜತೆ ಸರಣಿ ಗೆಲುವಿಗೆ ಭಾರತದ ಗುರಿ