NEP ಜಾರಿಗೊಳಿಸದಿದ್ದರೆ ಬಡ – ಪ್ರತಿಭಾವಂತ ಮಕ್ಕಳ ಭವಿಷ್ಯಕ್ಕೆ ಅಡ್ಡಿ

0
4

ಚಳ್ಳಕೆರೆ: ರಾಷ್ಟ್ರೀಯ ಶಿಕ್ಷಣ ನೀತಿ (NEP) ದೇಶದ ಎಲ್ಲಾ ವರ್ಗದ ಮಕ್ಕಳಿಗೂ ಸಮಾನ ಶಿಕ್ಷಣ ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ರೂಪುಗೊಂಡಿದೆ. ಆದರೆ ರಾಜ್ಯ ಸರ್ಕಾರ ಇದನ್ನು ಜಾರಿಗೆ ತರದೆ ರಾಜ್ಯ ಶಿಕ್ಷಣ ನೀತಿಯನ್ನು ಅನುಸರಿಸುತ್ತಿರುವುದು ಬಡ ಮತ್ತು ಪ್ರತಿಭಾವಂತ ಮಕ್ಕಳ ಕಾಲಿಗೆ ಸರಪಳಿ ಕಟ್ಟಿದಂತಾಗಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ ಅಭಿಪ್ರಾಯಪಟ್ಟರು.

ನಗರದ ಹೊಂಗಿರಣ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಆರ್ಥಿಕವಾಗಿ ಶಕ್ತರಾಗಿರುವವರಿಗೆ ಒಂದು ನ್ಯಾಯ, ಬಡವರಿಗೆ ಮತ್ತೊಂದು ನ್ಯಾಯ ಎನ್ನುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಬಹುಭಾಷಾ ಶಿಕ್ಷಣದ ಮೂಲಕ ಮಕ್ಕಳ ಬೌದ್ಧಿಕ ಸಾಮರ್ಥ್ಯ ಮತ್ತು ಜ್ಞಾನ ವಿಕಸನಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಪೂರಕವಾಗಿದ್ದು, ಇದು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸಲು ಸಹಕಾರಿಯಾಗಲಿದೆ ಎಂದರು.

ಇದನ್ನೂ ಓದಿ: KSDL-ಕೃಷಿ ಮಾರಾಟ ಇಲಾಖೆ ನೇಮಕಾತಿ ಪರೀಕ್ಷೆ ದಿನಾಂಕ ಬದಲಾವಣೆ

ರಾಜಕೀಯ ಲಾಭ-ನಷ್ಟಗಳನ್ನು ಬದಿಗಿಟ್ಟು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಕೂಡಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಗ್ರಾಮೀಣ ಪ್ರದೇಶದ ಮಕ್ಕಳು ಹಾಗೂ ಬಡ ಪ್ರತಿಭಾವಂತರಿಗೂ ಸಮಾನ ಅವಕಾಶಗಳು ದೊರೆಯಲಿವೆ ಎಂದು ಸಂಸದ ಕಾರಜೋಳ ಈ ವೇದಿಕೆಯ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲಾ ಸಂಸ್ಥೆಯ ಅಧ್ಯಕ್ಷ ಹೆಚ್.ಎಸ್. ರಾಜೇಶ್ ಗುಪ್ತ, ಮಕ್ಕಳಿಗೆ ಉತ್ತಮ ಸಂಸ್ಕಾರಗಳ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಶಾಲೆಯ ಧ್ಯೇಯವಾಗಿದ್ದು, ಭವಿಷ್ಯದ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಸಂಸ್ಥೆ ಸದಾ ಬದ್ಧವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿಲ್ಲ

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಡಾ. ರುದ್ರಯ್ಯ ಹಿರೇಮಠ, ಜಿಆರ್ ಜಯಸಿಂಹ, ಶಾಲೆಯ ಅಧ್ಯಕ್ಷ ಡಿ. ನಾಗಪ್ಪ, ಕಾರ್ಯದರ್ಶಿ ದಯಾನಂದ ಪ್ರಹ್ಲಾದ್, ಜಂಟಿ ಕಾರ್ಯದರ್ಶಿ ತಿಪ್ಪೇಸ್ವಾಮಿ, ನಿರ್ದೇಶಕರಾದ ಶಿವಪ್ರಸಾದ್, ಮಧುಸೂದನ್, ಕಲ್ಪನಾ ರಾಜೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ತಾಲೂಕು ಅಧ್ಯಕ್ಷ ಸುರೇಶ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ರಾಮದಾಸ್, ಬಿಜೆಪಿ ಮುಖಂಡ ಜಯ ಪಾಲಯ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಓಬಳೇಶ್ ಸೇರಿದಂತೆ ಹಲವಾರು ಮುಖಂಡರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Previous article‘ಬುಲ್ಡೋಜರ್ ನ್ಯಾಯ’ ಮತ್ತು ‘ಅಕ್ರಮ ಒತ್ತುವರಿ ತೆರವು’ ಎರಡಕ್ಕೂ ಭಾರೀ ವ್ಯತ್ಯಾಸವಿದೆ