ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆ ಅಗತ್ಯ

0
52

ಚಳ್ಳಕೆರೆ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕೇವಲ ಪಠ್ಯಪುಸ್ತಕಗಳ ಅಧ್ಯಯನವೊಂದೇ ಸಾಲದು, ಅದರ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅತ್ಯಗತ್ಯ ಎಂದು ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಚಿತ್ರದುರ್ಗ ಹಾಗೂ ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ, ಸಾಂಸ್ಕೃತಿಕ, ಎನ್.ಎಸ್.ಎಸ್. ಹಾಗೂ ರೋವರ್ಸ್ ಘಟಕಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: KSDL-ಕೃಷಿ ಮಾರಾಟ ಇಲಾಖೆ ನೇಮಕಾತಿ ಪರೀಕ್ಷೆ ದಿನಾಂಕ ಬದಲಾವಣೆ

ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಸಂಘಟನಾ ಮನೋಭಾವವನ್ನು ಬೆಳೆಸಿಕೊಳ್ಳಲು ಇಂತಹ ವೇದಿಕೆಗಳು ಸಹಕಾರಿಯಾಗಲಿವೆ ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಜು,ಎಸ್.ಲಕ್ಷ್ಮಣ ಮಾಜಿ ಅಧ್ಯಕ್ಷರು ಜಿಲ್ಲಾ ಉಪನ್ಯಾಸಕರ ಸಂಘ ಚಿತ್ರದುರ್ಗ, ಡಿಡಿಪಿಐ ತಿಮ್ಮಯ್ಯ, ಕಾಲೇಜಿನ ಉಪಾಧ್ಯಕ್ಷರಾದ ಶಿವಕುಮಾರ್, ನಿವೃತ್ತ ಪ್ರಾಧ್ಯಾಪಕರಾದ ಲಕ್ಷ್ಮಣ್, ಮೊಳಕಾಲ್ಮೂರು ಪಿಯು ಕಾಲೇಜಿನ ಪ್ರಾಂಶುಪಾಲರಾದ ಗೋವಿಂದಪ್ಪ, ಹಾಗೂ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಸಿ.ಟಿ. ವೀರೇಶ್ ಉಪಸ್ಥಿತರಿದ್ದರು. ಜೊತೆಗೆ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಖಜಾಂಚಿ ರುದ್ರಮುನಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಮಂಜುನಾಥ್, ಗುರುನಾಥ್ ಗುಪ್ತ, ದ್ಯಾಮಣ್ಣ ಹಾಗೂ ಪ್ರಾಧ್ಯಾಪಕರಾದ ಬೆಳಗಟ್ಟ ನಾಗರಾಜ್ ಅವರು ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ವರ್ಗ, ಸಿಬ್ಬಂದಿ, ಅಪಾರ ಸಂಖ್ಯೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಪೋಷಕರು ಹಾಜರಿದ್ದರು

Previous articleಬೆಳಗಾವಿ: ಕಾರು ಡಿಕ್ಕಿ ಹೊಡೆದು 13 ದ್ವಿಚಕ್ರ ವಾಹನಗಳು ನಜ್ಜುಗುಜ್ಜು
Next articleಸಹಕಾರಿ ಕ್ಷೇತ್ರದ ಹಿರಿಯ ನಾಯಕ ಹಳೇಮನೆ ಶಿವನಂಜಪ್ಪ ನಿಧನ