Home ನಮ್ಮ ಜಿಲ್ಲೆ ಬೆಳಗಾವಿ ಮಹಾ ಸಂಸದರಿಗೆ ನಿರ್ಬಂಧ: ಹಕ್ಕುಚ್ಯುತಿ ಉಲ್ಲಂಘನೆ ಆಗಿಲ್ಲ

ಮಹಾ ಸಂಸದರಿಗೆ ನಿರ್ಬಂಧ: ಹಕ್ಕುಚ್ಯುತಿ ಉಲ್ಲಂಘನೆ ಆಗಿಲ್ಲ

0
1

ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿಗಳ ವಿರುದ್ಧ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆಯವರು ಲೋಕಸಭಾ ಸ್ಪೀಕರ್‌ಗೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಸೋಮವಾರ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದರು.

ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಸಂಸದರ ಯಾವುದೇ ಹಕ್ಕುಚ್ಯುತಿ ಉಲ್ಲಂಘನೆಯಾಗಿಲ್ಲವೆಂದು ಸಮಗ್ರ ವಿಷಯದ ಕುರಿತು ವಿವರ ನೀಡಿ, ವಿಶೇಷ ಅಧಿಕಾರ ಕ್ರಮ ಕೈಗೊಳ್ಳಬಾರದೆಂದು ಮನವಿ ಮಾಡಿದರು.

ಬೆಳಗಾವಿಯ ಜಿಲ್ಲಾಧಿಕಾರಿಗಳು ಕರಾಳ ದಿನಾಚರಣೆಯ ಸಭೆಗೆ ಆಗಮಿಸಲು ಉದ್ದೇಶಿಸಿದ್ದ ಸಂಸದ ಧೈರ್ಯಶೀಲ ಮಾನೆಯವರಿಗೆ ಬೆಳಗಾವಿ ಪ್ರವೇಶ ನಿರ್ಬಂಧಿಸುವ ನಿರ್ಧಾರ ತೆಗೆದುಕೊಂಡಿರುವುದು ಹಕ್ಕುಚ್ಯುತಿಯ ಕ್ರಮವಲ್ಲ ಬದಲಾಗಿ ಅದು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾನೂನು ಕ್ರಮವಾಗಿರುತ್ತದೆ. ಬೆಳಗಾವಿ ಜಿಲ್ಲಾಧಿಕಾರಿ ಹೊರಡಿಸಿರುವ ನಿಷೇಧಾಜ್ಞೆಯು ಸಂಪೂರ್ಣವಾಗಿ ಸಾಂವಿಧಾನಿಕವಾಗಿದ್ದು, ಇದು ಕಾನೂನಿನ ವ್ಯಾಪ್ತಿಯಲ್ಲಿದೆ ಎಂದು ಜಿಲ್ಲಾಧಿಕಾರಿಗಳನ್ನು ಸಮರ್ಥನೆ ಮಾಡಿಕೊಂಡು ವಾಸ್ತವ ಸ್ಥಿತಿಗತಿಯ ಬಗ್ಗೆ ಸ್ಪೀಕರ್ ಗಮನಕ್ಕೆ ತಂದು ವಿವರ ನೀಡಿದರು.

ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸ್ಪೀಕರ್ ಓಂ ಬಿರ್ಲಾ ಅವರು ಸಂಸದ ಧೈರ್ಯಶೀಲ ಮಾನೆಯವರು ಮನವಿ ಸಲ್ಲಿಸಿದರೂ ನಾನು ಯಾವುದೇ ಏಕಪಕ್ಷೀಯ ನಿರ್ಣಯ ಕೈಗೊಳ್ಳುವುದಿಲ್ಲ. ಯಾವ ಹಿನ್ನೆಲೆಯಲ್ಲಿ ಈ ಘಟನೆ ನಡೆದಿವೆ ಎನ್ನುವುದರ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಕರ್ನಾಟಕ ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.