ಕರ್ನಾಟಕದಲ್ಲಿ ಹೆಸರು ಖರೀದಿ ಗಡವು ವಿಸ್ತರಣೆ

0
4

ನವದೆಹಲಿ: ಕರ್ನಾಟಕದಲ್ಲಿ 2025-26ರ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರುಕಾಳು (ಮೂಂಗ್) ಖರೀದಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಸಮಯವನ್ನು ಜ. 22ರವರೆಗೆ (ಒಂದು ತಿಂಗಳು) ವಿಸ್ತರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. .

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರ ಈ ಕೂಡಲೇ ಈಗ ಜಿಲ್ಲಾವಾರು ಖರೀದಿ ಪ್ರಕ್ರಿಯೆಯನ್ನು ಮುಂದುವರಿಸಿ ರಾಜ್ಯದ್ಯಂತ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಕೋರಿದ್ದಾರೆ.

ರಾಜ್ಯದಲ್ಲಿ ಹೆಸರು ಕಾಳು ಖರೀದಿಯನ್ನು ವಿಸ್ತರಿಸುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚವಾಣ ಅವರಿಗೆ ವಿನಂತಿಸಲಾಗಿತ್ತು. ಅವರ ವಿನಂತಿಯ ಮೇರೆಗೆ ಖರೀದಿ ಸಮಯ ವಿಸ್ತರಿಸಿದ್ದಾರೆ ಎಂದು ತಿಳಿಸಿದ್ದಾರೆ.

Previous articleಬೆಂಗಳೂರಿನಲ್ಲಿ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ