ಚಿತ್ರದುರ್ಗ: ವೇಗವಾಗಿ ಚಲಿಸುತ್ತಿದ್ದ ಬೈಕ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಚಳ್ಳಕೆರೆ ತಾಲೂಕಿನ ನೇರ್ಲಗುಂಟೆ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಕಾಶ (50) ಅವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದ ರಭಸಕ್ಕೆ ಸವಾರ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದರು. ಇದೇ ಮಾರ್ಗದಲ್ಲಿ ಹೋಗುತ್ತಿದ್ದ ನಿವೃತ್ತ ತಹಶೀಲ್ದಾರ್ ಎನ್. ರಘುಮೂರ್ತಿ ಅವರು ಕ್ಷಣವೂ ತಡಮಾಡದೆ ಬೈಕ್ ಚಾಲಕನನ್ನು ತಮ್ಮ ಸ್ವಂತ ವಾಹನದಲ್ಲಿ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಈ ಘಟನೆಯ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಕಾಲದಲ್ಲಿ ಸ್ಪಂದಿಸಿದ ರಘುಮೂರ್ತಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.























