Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಬಳ್ಳಾರಿ ಗುಂಪು ಘರ್ಷಣೆ: ತನಿಖೆ ನಡೆಸಿ ವರದಿ ನೀಡಲು ಸಿಎಂ ಸೂಚನೆ

ಬಳ್ಳಾರಿ ಗುಂಪು ಘರ್ಷಣೆ: ತನಿಖೆ ನಡೆಸಿ ವರದಿ ನೀಡಲು ಸಿಎಂ ಸೂಚನೆ

0
24

ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪು ಘರ್ಷಣೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪು ಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು, ಆದ್ದರಿಂದ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದರು.

Previous articleಜನಾರ್ದನ ರೆಡ್ಡಿ ಮನೆಯತ್ತ‌ ಫೈರಿಂಗ್
Next articleಅಧಿಕಾರಿಗಳಿಗೆ ಜಾತ್ಯಾತೀತ ದೃಷ್ಟಿಕೋನದ ಪಾಠ ಮಾಡಿದ ಸಿಎಂ