ಹುಬ್ಬಳ್ಳಿ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ – ಮೂವರ ಬಂಧನ

0
2

ಹುಬ್ಬಳ್ಳಿ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ, ಶಿವಮೊಗ್ಗ ಮೂಲದ ಮಹಿಳೆ ಗಂಡನೊಂದಿಗೆ ಉಂಟಾದ ಗೃಹ ಕಲಹದಿಂದ ಮನೆ ಬಿಟ್ಟು ಹುಬ್ಬಳ್ಳಿಗೆ ಬಂದಿದ್ದಾಳೆ. ಆಕೆಯ ಪತಿ ಒಂದು ಪ್ರಕರಣದ ಆರೋಪಿಯಾಗಿ ಶಿವಮೊಗ್ಗ ಜೈಲಿನಲ್ಲಿ ಬಂಧನದಲ್ಲಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದ ಮಹಿಳೆ ಹುಬ್ಬಳ್ಳಿಯಲ್ಲಿ ಅಲೆದಾಡುತ್ತಿದ್ದಳು.

ಇದನ್ನೂ ಓದಿ:  ಬಿಜೆಪಿ ಉಪಾಧ್ಯಕ್ಷ ಆತ್ಮಹತ್ಯೆಗೆ ಶರಣು

ಶನಿವಾರ ರಾತ್ರಿ ಹಳೆ ಹುಬ್ಬಳ್ಳಿಯ ಹೆಗ್ಗೆರಿ ಮೈದಾನ ಪ್ರದೇಶದಿಂದ ಇಬ್ಬರು ಆರೋಪಿಗಳು ಮಹಿಳೆಯನ್ನು ಅಪಹರಿಸಿ, ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಈ ಘಟನೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಮಾಹಿತಿ ಆಧರಿಸಿ ಪೊಲೀಸರು ಮಹಿಳೆಯನ್ನು ಪತ್ತೆ ಹಚ್ಚಿದ್ದಾರೆ.

ವಿಡಿಯೋ ದೃಶ್ಯಗಳ ಪರಿಶೀಲನೆ ಹಾಗೂ ಮಹಿಳೆಯ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ:  ಲೈಂಗಿಕ ಕಿರುಕುಳ ಆರೋಪ: ಕಾಂಗ್ರೆಸ್ ಉಚ್ಚಾಟಿತ ಶಾಸಕ ಪೊಲೀಸ್‌ ವಶಕ್ಕೆ

ಮಹಿಳೆ ಹುಬ್ಬಳ್ಳಿಗೆ ಬಂದ ಬಳಿಕ ಸಿದ್ಧಾರೂಢ ಮಠದಲ್ಲಿ ಊಟ ಮಾಡಿಕೊಂಡು, ಬಳಿಕ ಭಿಕ್ಷೆ ಬೇಡುತ್ತ ತಿರುಗುತ್ತಿದ್ದಳು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಪೊಲೀಸರು ಸ್ವಯಂಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳ ಹಿನ್ನೆಲೆ, ಘಟನೆಯ ಸಂದರ್ಭ ಹಾಗೂ ಇತರ ಅಂಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

Previous articleʼರಕ್ಕಸಪುರ’ದಿಂದ ಬಂದ ʼನೀನಾ… ನೀನೇನಾʼ ಮೆಲೋಡಿ ಹಾಡು