ಜ.17ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ

0
21

ಚಿತ್ರದುರ್ಗ: ರಾಜ್ಯದಲ್ಲಿ ನಡೆಯುತ್ತಿರುವ ಅರಾಜಕತೆ, ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯಗಳ ವಿರುದ್ಧ ಹೋರಾಟ ನಡೆಸಲು ಬಿಜೆಪಿ ತೀರ್ಮಾನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, “ಮೊದಲ ಹಂತವಾಗಿ ಜನವರಿ 17ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಇದು ರಾಜ್ಯ ಸರ್ಕಾರದ ವಿರುದ್ಧದ ಜನಾಕ್ರೋಶದ ಆರಂಭ ಮಾತ್ರ” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:  ಆತ್ಮ ಜಾಗೃತಿಯ ಪರ್ವ ಸಂಕ್ರಾಂತಿ ಹಬ್ಬ ವಿಡಿಯೋ ನೋಡಿ: ಮಕರ ಸಂಕ್ರಾತಿ ಎಳ್ಳು ಬೆಲ್ಲ ವಿಶೇಷತೆ

ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಸವಾಲು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶಿಕಾರಿಪುರಕ್ಕೆ ಪಾದಯಾತ್ರೆ ಮಾಡುವ ಕುರಿತು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, “ಪಾದಯಾತ್ರೆ ಬೇಡ. ಡಿಕೆಶಿ ಶಿಕಾರಿಪುರಕ್ಕೆ ಬಂದು ನೇರವಾಗಿ ಸ್ಪರ್ಧೆ ಮಾಡಲಿ” ಎಂದು ಸವಾಲು ಹಾಕಿದರು. “ಶಿಕಾರಿಪುರಕ್ಕೆ ಬಂದು ಜನರ ಎದುರು ನಿಲ್ಲುವ ಧೈರ್ಯವಿದೆಯೇ ಎಂದು ನೋಡೋಣ” ಎಂದು ಟಾಂಗ್ ನೀಡಿದರು.

ಎನ್‌ಡಿಎ ಕುರಿತು ಸ್ಪಷ್ಟನೆ: ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಎನ್‌ಡಿಎಗೆ ಸೇರ್ಪಡೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ, “ಇದು ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ತೆಗೆದುಕೊಂಡ ತೀರ್ಮಾನ. ದೇಶದ ಹಿತಕ್ಕಾಗಿ ಈ ಒಗ್ಗಟ್ಟು ಅಗತ್ಯ” ಎಂದು ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಮಾತನಾಡಿದ ಅವರು, “ಈ ಬಗ್ಗೆ ಪಕ್ಷದ ವರಿಷ್ಠರು ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳುತ್ತಾರೆ” ಎಂದು ತಿಳಿಸಿದರು.

ಇದನ್ನೂ ಓದಿ:  ತೇಜಸ್ವಿ – ವಿಸ್ಮಯ : ಲಾಲ್‌ಬಾಗ್‌ನಲ್ಲಿ ಜ.14ರಿಂದ ಫಲಪುಷ್ಪ ಪ್ರದರ್ಶನ

ಮನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆರೋಪ ಮಾಡಿದ ವಿಜಯೇಂದ್ರ, “ಮನರೇಗಾ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. ಗ್ರಾಮೀಣ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಜಿ ರಾಮ್ ಜಿ ಸೇರಿದಂತೆ ಹಲವು ಯೋಜನೆಗಳಲ್ಲಿ ಹಣ ದುರುಪಯೋಗವಾಗಿದೆ” ಎಂದು ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, “ಇದರ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಜಾಗೃತಿ ಮೂಡಿಸಲಿದೆ” ಎಂದು ಹೇಳಿದರು.

ಇದನ್ನೂ ಓದಿ:  ನಮ್ಮ ಧಾರ್ಮಿಕ ಶ್ರದ್ಧೆ ಸರ್ಕಾರದ ಆಟದ ವಸ್ತುವಲ್ಲ : ಸಿ.ಟಿ.ರವಿ

ಕಾಂಗ್ರೆಸ್ ಒಳಜಗಳಕ್ಕೆ ತೀಕ್ಷ್ಣ ವ್ಯಂಗ್ಯ: ಮೈಸೂರು ಹೆಲಿಪ್ಯಾಡ್‌ನಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಚರ್ಚೆ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, “ಇರಲಿ ಪಾಪ… ಅದು ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ” ಎಂದು ವ್ಯಂಗ್ಯವಾಡಿದರು. “ಒಬ್ಬರಿಗೆ ಸಿಎಂ ಕುರ್ಚಿ ಉಳಿಸಿಕೊಳ್ಳುವ ಕಾತುರ, ಉಳಿದವರು ‘ನನ್ನ ತಾಳ್ಮೆ ಕೆಣಕಬೇಡಿ’ ಎಂದು ಸಿದ್ಧರಾಗಿದ್ದಾರೆ. ಈ ನಡುವೆ ರಾಜ್ಯದ ಜನರು ಮಾತ್ರ ತೊಂದರೆ ಅನುಭವಿಸುತ್ತಿದ್ದಾರೆ” ಎಂದು ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ ಜನ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಹೇಳಿದ ಅವರು, “ನಿನ್ನೆ ಜರ್ಮನಿ ಚಾನ್ಸಲರ್ ರಾಜ್ಯಕ್ಕೆ ಬಂದಿದ್ದರೆ, ಒಬ್ಬರು ಸಿಎಂ ಕುರ್ಚಿ ಉಳಿಸಿಕೊಳ್ಳಲು ಹೋಗಿದ್ದಾರೆ, ಮತ್ತೊಬ್ಬರು ಕುರ್ಚಿ ಕಸಿಯಲು ಹೋಗಿದ್ದಾರೆ. ಇಬ್ಬರೂ ರಾಹುಲ್ ಗಾಂಧಿ ಬಳಿ ನಿಂತಿದ್ದಾರೆ” ಎಂದು ಟೀಕಿಸಿದರು.

ಇದನ್ನೂ ಓದಿ:  ಲಕ್ಕುಂಡಿ ನಿಧಿ ಸರ್ಕಾರಕ್ಕೆ ನೀಡಿದ ಪ್ರಾಮಾಣಿಕತೆಗೆ ಗೌರವ: ಉಚಿತ ಶಿಕ್ಷಣ – ಕುಟುಂಬಕ್ಕೆ ಮನೆ–ಉದ್ಯೋಗದ ಭರವಸೆ

“ರಾಜ್ಯದ ಪರಿಸ್ಥಿತಿ ಏನಾಗುತ್ತಿದೆ ಎಂದು ಜನ ಗಮನಿಸುತ್ತಿದ್ದಾರೆ. ಬರುವ ದಿನಗಳಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ” ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

Previous articleಆತ್ಮ ಜಾಗೃತಿಯ ಪರ್ವ ಸಂಕ್ರಾಂತಿ ಹಬ್ಬ