Home ಸುದ್ದಿ ವಿದೇಶ ಭೀಕರ ರೈಲು ದುರಂತ: ರೈಲಿನ ಮೇಲೆ ಕ್ರೇನ್ ಕುಸಿದು 22 ಪ್ರಯಾಣಿಕರು ಮೃತ್ಯು

ಭೀಕರ ರೈಲು ದುರಂತ: ರೈಲಿನ ಮೇಲೆ ಕ್ರೇನ್ ಕುಸಿದು 22 ಪ್ರಯಾಣಿಕರು ಮೃತ್ಯು

0
22

ಥೈಲ್ಯಾಂಡ್‌ನ ಈಶಾನ್ಯ ಭಾಗದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಪ್ರಯಾಣಿಕರ ರೈಲಿನ ಮೇಲೆ ಕ್ರೇನ್ ಕುಸಿದು ಕನಿಷ್ಠ 22 ಜನರು ಮೃತಪಟ್ಟಿದ್ದಾರೆ. ಈ ದುರ್ಘಟನೆ ಬುಧವಾರ ಬೆಳಿಗ್ಗೆ ಥೈಲ್ಯಾಂಡ್‌ನ ನಖೋನ್ ರಾಟ್ಚಸಿಮಾ ಪ್ರಾಂತ್ಯದ ಸಿಖಿಯೊ ಜಿಲ್ಲೆಯಲ್ಲಿ ನಡೆದಿದೆ.

ಈ ಪ್ರದೇಶವು ರಾಜಧಾನಿ ಬ್ಯಾಂಕಾಕ್‌ನಿಂದ ಸುಮಾರು 230 ಕಿಲೋಮೀಟರ್ (143 ಮೈಲು) ದೂರದಲ್ಲಿದೆ. ಅಪಘಾತಕ್ಕೊಳಗಾದ ರೈಲು ಬ್ಯಾಂಕಾಕ್‌ನಿಂದ ಉಬೊನ್ ರಾಟ್ಚತಾನಿ ಪ್ರಾಂತ್ಯದತ್ತ ಪ್ರಯಾಣಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:  ಆತ್ಮ ಜಾಗೃತಿಯ ಪರ್ವ ಸಂಕ್ರಾಂತಿ ಹಬ್ಬ ವಿಡಿಯೋ ನೋಡಿ: ಮಕರ ಸಂಕ್ರಾತಿ ಎಳ್ಳು ಬೆಲ್ಲ ವಿಶೇಷತೆ

ಹೈಸ್ಪೀಡ್ ರೈಲು ಯೋಜನೆ ವೇಳೆ ಅಪಘಾತ: ಅಪಘಾತದ ಸಮಯದಲ್ಲಿ, ಈ ಪ್ರದೇಶದಲ್ಲಿ ಹೈಸ್ಪೀಡ್ ರೈಲು ಯೋಜನೆಯ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿಗಾಗಿ ಬಳಸಲಾಗುತ್ತಿದ್ದ ದೊಡ್ಡ ಕ್ರೇನ್‌ ಏಕಾಏಕಿ ನಿಯಂತ್ರಣ ತಪ್ಪಿ ಕುಸಿದು, ರೈಲಿನ ಒಂದು ಬೋಗಿಯ ಮೇಲೆ ಬಿದ್ದಿದೆ. ಪರಿಣಾಮವಾಗಿ ರೈಲು ತೀವ್ರವಾಗಿ ಹಳಿ ತಪ್ಪಿದ್ದು, ಬೋಗಿಗಳು ಪರಸ್ಪರ ಡಿಕ್ಕಿಯಾಗಿ ಭಾರೀ ಹಾನಿಯಾಗಿದೆ.

ಕ್ರೇನ್ ಬೋಗಿಯ ಮೇಲೆ ಬೀಳುತ್ತಿದ್ದಂತೆಯೇ ಪ್ರಯಾಣಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣಗೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ:  ಜ.17ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ

195ಕ್ಕೂ ಹೆಚ್ಚು ಪ್ರಯಾಣಿಕರು ರೈಲಿನಲ್ಲಿ: ಅಪಘಾತದ ವೇಳೆ ರೈಲಿನಲ್ಲಿ ಸುಮಾರು 195 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ತಕ್ಷಣವೇ ರಕ್ಷಣಾ ಪಡೆಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದಾಗಿ ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:  ತೇಜಸ್ವಿ – ವಿಸ್ಮಯ : ಲಾಲ್‌ಬಾಗ್‌ನಲ್ಲಿ ಜ.14ರಿಂದ ಫಲಪುಷ್ಪ ಪ್ರದರ್ಶನ

ಸರ್ಕಾರದಿಂದ ತನಿಖೆಗೆ ಆದೇಶ: ಘಟನೆಯ ಗಂಭೀರತೆಯನ್ನು ಗಮನಿಸಿದ ಥೈಲ್ಯಾಂಡ್ ಸರ್ಕಾರ, ಅಪಘಾತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಕ್ರೇನ್ ಕುಸಿತಕ್ಕೆ ಕಾರಣವಾದ ತಾಂತ್ರಿಕ ದೋಷವೇ ಅಥವಾ ಮಾನವ ನಿರ್ಲಕ್ಷ್ಯವೇ ಎಂಬುದರ ಕುರಿತು ಪರಿಶೀಲನೆ ನಡೆಯಲಿದೆ. ಹೈಸ್ಪೀಡ್ ರೈಲು ಯೋಜನೆಯ ಸುರಕ್ಷತಾ ಕ್ರಮಗಳ ಮೇಲೂ ಪ್ರಶ್ನೆಗಳು ಎದ್ದಿವೆ.