ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ

0
4

ಲಕ್ನೋ: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

ದೆಹಲಿಯಿಂದ ಪಶ್ಚಿಮ ಬಂಗಾಳದ ಬಾಗೋಗ್ರಾಗೆ ಹೊರಟಿದ್ದ ಇಂಡಿಗೋ ಏರ್‌ಲೈನ್ಸ್ ವಿಮಾನ 6E-6650ನಲ್ಲಿ ಬಾಂಬ್‌ ಇದೆ ಎಂದು ಬೆಳಗ್ಗೆ 8.46 ಕ್ಕೆ ಬೆದರಿಕೆ ಬಂದಿದೆ. ಕೂಡಲೇ ವಿಮಾನವನ್ನು 9.17ರ ಸುಮಾರಿಗೆ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು.

ಇದನ್ನೂ ಓದಿ: ಬಿಗ್‌ಬಾಸ್‌ ಕನ್ನಡ ಸೀಸನ್‌ 12: ಇದ್ದ ಆರರಲ್ಲಿ ಗೆಲ್ಲೋರ್‍ಯಾರು?

ವಿಮಾನದಲ್ಲಿದ್ದ 222 ಜನ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಬಾಂಬ್ ಪತ್ತೆ ದಳ ಹಾಗೂ ಭದ್ರತಾ ಸಂಸ್ಥೆಗಳು, ಅಧಿಕಾರಿಗಳು ವಿಮಾನವನ್ನು ತಪಾಸಣೆಗೆ ನಡೆಸಿದ್ದಾರೆ.

ತಪಾಸಣೆ ವೇಳೆ ಭದ್ರತಾ ಸಿಬ್ಬಂದಿಗೆ ಟಿಶ್ಯೂ ಪೇಪರ್‌ನಲ್ಲಿ “ವಿಮಾನದಲ್ಲಿ ಬಾಂಬ್ ಇಡಲಾಗಿದೆ” ಎಂದು ಬರೆದಿರುವ ಪೇಪರ್‌ ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Previous articleಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಬಯೋತ್ಪಾದನೆಯಿಂದ ಆತಂಕ