Home ನಮ್ಮ ಜಿಲ್ಲೆ ಉತ್ತರ ಕನ್ನಡ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನತೆಯ ಮುಂದಿಡಿ

ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನತೆಯ ಮುಂದಿಡಿ

0
4

ದಾಂಡೇಲಿ: ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ತಲುಪಿಸಿ – ಆರ್.ವಿ.ದೇಶಪಾಂಡೆ

ದಾಂಡೇಲಿ (ಉತ್ತರ ಕನ್ನಡ): ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಜನಪರ ಯೋಜನೆಗಳನ್ನು ಮನೆಮನೆಗೂ ತಲುಪಿಸುವ ಜವಾಬ್ದಾರಿ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ. ಕೇಂದ್ರ ಸರ್ಕಾರದ ವೈಫಲ್ಯಗಳಿಂದಾಗಿ ಜನಸಾಮಾನ್ಯರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಜನರ ಮುಂದೆ ಸ್ಪಷ್ಟವಾಗಿ ಎಳೆ ಎಳೆಯಾಗಿ ಇಟ್ಟು ವಿವರಿಸಬೇಕು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಸ್ಥಳೀಯ ಶಾಸಕರಾದ ಆರ್.ವಿ.ದೇಶಪಾಂಡೆ ಅವರು ಹೇಳಿದರು.

ಅವರು ದಾಂಡೇಲಿಯ ಮರಾಠಾ ಸಮಾಜದ ಸಭಾಭವನದಲ್ಲಿ ನಡೆದ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ: ನಾನು ಮುಂದಿನ ಚುನಾವಣೆಯ ಸಿಎಂ ಆಕಾಂಕ್ಷಿ

ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು, ಅವರನ್ನು ಸದೃಢಗೊಳಿಸುವುದು ಅತ್ಯಗತ್ಯವಾಗಿದೆ. ಪಕ್ಷ ಸಂಘಟನೆ ಸುಲಭದ ಕೆಲಸವಲ್ಲ. ಪ್ರತಿಯೊಬ್ಬ ಕಾರ್ಯಕರ್ತರೂ ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಜನರ ನಡುವೆ ಹೋಗಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜನಸಾಮಾನ್ಯರ ನೋವು-ನಲಿವುಗಳನ್ನು ಅರಿತು ಅವರಿಗೆ ಧೈರ್ಯ ತುಂಬುವ ಕೆಲಸ ಕಾಂಗ್ರೆಸ್ ಕಾರ್ಯಕರ್ತರಿಂದ ಆಗಬೇಕು ಎಂದು ಅವರು ಕರೆ ನೀಡಿದರು.

ನಗರಸಭೆ ಮತ್ತು ಗ್ರಾಮ ಪಂಚಾಯತ್‌ಗಳ ಅವಧಿ ಈಗಾಗಲೇ ಮುಗಿದಿದ್ದು, ಸದ್ಯದಲ್ಲೇ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸಂಘಟನೆಗೆ ಆದ್ಯತೆ ನೀಡಿ, ಜನರೊಂದಿಗೆ ನೇರ ಸಂವಹನ ನಡೆಸಬೇಕು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ದೇಶಪಾಂಡೆ ಹೇಳಿದರು.

ಇದನ್ನೂ ಓದಿ: ನಾನು ಮುಂದಿನ ಚುನಾವಣೆಯ ಸಿಎಂ ಆಕಾಂಕ್ಷಿ

ಕಾರ್ಯಕರ್ತರು ಯಾವುದೇ ಸಮಸ್ಯೆ, ಸಲಹೆ ಅಥವಾ ಗೊಂದಲಗಳಿದ್ದರೂ ತಮ್ಮನ್ನು ನೇರವಾಗಿ ಸಂಪರ್ಕಿಸುವಂತೆ ಸೂಚಿಸಿದ ಅವರು, ಪಕ್ಷದ ಹಿತದೃಷ್ಟಿಯಿಂದ ಎಲ್ಲರಿಗೂ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದರು.

ಸಭೆಯಲ್ಲಿ ಮಾತನಾಡಿದ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಪೂರ್ಣ ಸಿದ್ಧತೆ ನಡೆಸಲಾಗುವುದು ಎಂದು ತಿಳಿಸಿದರು. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಕ್ಷದ ಸ್ಥಳೀಯ ಪದಾಧಿಕಾರಿಗಳಾದ ಕೀರ್ತಿ ಗಾಂವಕರ, ರೇಣುಕಾ ಬಂದಮ್, ಮಹಮ್ಮದ್ ಉಸ್ಮಾನ್ ಶೇಖ, ಇಕ್ಬಾಲ್ ಶೇಖ, ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಅಸ್ಪಾಕ್ ಶೇಖ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಿಯಾಜ್ ಬಾಬು ಸಯ್ಯದ್ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.