ಬೆಂಗಳೂರು: ಜನವರಿ 22ರಿಂದ 31ರ ವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ (MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು.
ಇದನ್ನೂ ಓದಿ: ಪಕ್ಷದ ವಿಚಾರದಲ್ಲಿ ನಿತಿನ್ ನಬಿನ್ ನನಗೂ ಬಾಸ್: ನರೇಂದ್ರ ಮೋದಿ
ವರಿಷ್ಠರು ಕರೆ ನೀಡಿದರೆ ದೆಹಲಿಗೆ: ಮುಖ್ಯಮಂತ್ರಿಗಳ ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.
ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ, ಅಮಾನತುಗೊಳಿಸಲಾಗಿದೆ ಎಂದರು.






















