Home Advertisement
Home ತಾಜಾ ಸುದ್ದಿ ಹಂಪಿ ಉತ್ಸವ ಲೋಗೊ ಅನಾವರಣ

ಹಂಪಿ ಉತ್ಸವ ಲೋಗೊ ಅನಾವರಣ

0
125

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಲ್ಲಿ ಜ.೨೭ರಿಂದ ನಡೆಯಲಿರುವ ಹಂಪಿ ಉತ್ಸವದ ಆಚರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹಂಪಿ ಉತ್ಸವದ ಲೋಗೊ ಅನಾವರಣಗೊಳಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಹಂಪಿ ಉತ್ಸವದ ಲೋಗೊವನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಗೃಹ ಸಚಿವ ಅರಗ ಜ್ಞಾನೇಂದ್ರ, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಪೌರಾಡಳಿತ ಸಚಿವರಾದ ಎಂಟಿಬಿ ನಾಗರಾಜ್, ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಇದ್ದರು.