ಬೇರೆಡೆ ಕತ್ತು ಬಿಗಿದು ಹತ್ಯೆ: ನಿರ್ಜನ ಪ್ರದೇಶದಲ್ಲಿ ಶವ ಎಸೆದು ಪರಾರಿ
ಧಾರವಾಡ: ನಗರವನ್ನು ಬೆಚ್ಚಿಬೀಳಿಸಿದ ಭೀಕರ ಘಟನೆಯಲ್ಲಿ, ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳನ್ನು ದುಷ್ಕರ್ಮಿಗಳು ಬೇರೆಡೆ ಕತ್ತು ಬಿಗಿದು ಕೊಲೆ ಮಾಡಿ, ನಂತರ ಶವವನ್ನು ನಿರ್ಜನ ಪ್ರದೇಶಕ್ಕೆ ತಂದು ಎಸೆದಿರುವ ಘಟನೆ ಜನವರಿ 21ರ ಬುಧವಾರ ಬೆಳಕಿಗೆ ಬಂದಿದೆ. ಈ ಪ್ರಕರಣ ಧಾರವಾಡ ಜಿಲ್ಲೆಯಲ್ಲಿ ಭಾರೀ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.
ಮೃತ ವಿದ್ಯಾರ್ಥಿನಿ ಯಾರು?: ಕೊಲೆಯಾದ ಯುವತಿಯನ್ನು 19 ವರ್ಷದ ಝಕಿಯಾ ಎಂದು ಗುರುತಿಸಲಾಗಿದೆ. ಝಕಿಯಾ ಧಾರವಾಡದ ನಿವಾಸಿಯಾಗಿದ್ದು. ಯುವತಿಯನ್ನು ಹತ್ಯೆಗೈದು ಶವ ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ ಸ್ಥಳಕ್ಕೆ ಎಸ್ ಪಿ ಗುಂಜನ ಆರ್ಯ ಮತ್ತು ಸಿಪಿಐ ಶಿವಾನಂದ ಕಮತಗಿ ಭೇಟಿ ನೀಡಿದ್ದರು.ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಸಂಸದ ಬಿವೈ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಕುಟುಂಬದ ಆಕ್ರಂದನ: ಯುವತಿ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಮತ್ತು ಸಂಬಂಧಿಕರು ಸ್ಥಳಕ್ಕೆ ಧಾವಿಸಿದ್ದು, ಕಣ್ಣೀರಿನ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕ ವಲಯದಲ್ಲಿ ಮಹಿಳೆಯರ ಸುರಕ್ಷತೆ ಕುರಿತಾಗಿ ತೀವ್ರ ಚರ್ಚೆ ಆರಂಭವಾಗಿದೆ.






















