Home Advertisement
Home ನಮ್ಮ ಜಿಲ್ಲೆ ಮೈಸೂರು ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ

ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ

0
8

ಮೈಸೂರು: ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಮಾಧ್ಯಮದವರ ಜೊತೆ ಮಾತನಾಡಿ, ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ ಎಂದರು.

ಸರ್ಕಾರ ಕೊಟ್ಟಿರುವ ಭಾಷಣ ಬದಲಾಯಿಸುವ ಸಾಧ್ಯತೆ ಇದೆ: ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ವರದಿ ನೀಡಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿದ್ಯಮಾನಗಳ ಬಗ್ಗೆ ತಿಳಿಸಿದ್ದಾರೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ಕೊಟ್ಟಿರುವ ಭಾಷಣವನ್ನು ಅವರು ಓದಲೇಬೇಕು. ನಾವು ಬರೆದುಕೊಟ್ಟಿರುವುದನ್ನು ಅವರು ಬದಲಾಯಿಸುವ ಸಾಧ್ಯತೆ ಇರುತ್ತದೆ ಎಂದರು.

ಕರ್ನಾಟಕದ ಸ್ತಬ್ಧಚಿತ್ರ ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ: ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಪತ್ರ ವ್ಯವಹಾರವೆಲ್ಲಾ ಆಗಿದ್ದರೂ, ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ ಎಂದರು.

ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ: ನಿನ್ನೆ ನಡೆದ ಜೆಡಿಎಸ್ ಸಮಾವೇಶದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಕಾನೂನಿನ ಪ್ರಕಾರ ಪ್ರಜ್ವಲ್ ರೇವಣ್ಣ ಅವರ ಬಂಧನವಾಗಿದ್ದು ಸರ್ಕಾರ ಅದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಇದೊಂದೇ ಪ್ರಕರಣವಲ್ಲ. ಯಾವುದೇ ಪ್ರಕರಣದಲ್ಲಿಯೂ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದರು.

ಅಧಿಕಾರಿಗಳಿಗೆ ಸರ್ಕಾರ ಬಹುಮಾನ ಕೊಟ್ಟಿಲ್ಲ. ಅದೆಲ್ಲಾ ಸುಳ್ಳು ಎಂದರು. ನಮಗೂ ಸಮಯ ಬರುತ್ತದೆ ಎಂದು ಹೆಚ್.ಡಿ. ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಅವರು ಯಾವ ಸಂದರ್ಭದಲ್ಲಿ ಹೇಳುತ್ತಾರೆ ಎಂದು ಗೊತ್ತಿಲ್ಲ. 17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ ಎಂದು ಪ್ರಶ್ನಿಸಿದರು. ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದೇ ಇಲ್ಲ. ಕಾಂಗ್ರೆಸ್ 140 ಸ್ಥಾನ ಗಳಿಸಿದೆ. 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು ಎಂದು ಸಿಎಂ ಭರವಸೆ ವ್ಯಕ್ತಪಡಿಸಿದರು. ಜಿಡಿಎಸ್ ಮತ್ತು ಬಿಜೆಪಿಯವರು ಮೈತ್ರಿ ಮಾಡಿಕೊಂಡರು ಅಧಿಕಾರಕ್ಕೆ ಬರುವುದಿಲ್ಲ ಎಂದರು.

ಫೆಬ್ರವರಿಯಿಂದ ಬಜೆಟ್ ಕುರಿತ ಸಭೆ: ಬಜೆಟ್ ಸಭೆಗಳು ಫೆಬ್ರವರಿಯಿಂದ ಪ್ರಾರಂಭವಾಗುತ್ತದೆ ಎಂದರು.

Previous articleಐದು ವರ್ಷಗಳ ಕಾಲ ನಿರಂತರ ರಂಗ ಚಟುವಟಿಕೆಗೆ ಯೋಜನೆ: ಖರ್ಗೆ