ನವದೆಹಲಿ: ಖ್ಯಾತ ಪತ್ರಕರ್ತ, ಲೇಖಕ ಸರ್ ವಿಲಿಯಂ ಮಾರ್ಕ್ ಟುಲ್ಲಿ (90) ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ವಾರದ ಹಿಂದಷ್ಟೇ ಸಾಕೇತ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಭಾನುವಾರ ಕೊನೆಯುಸಿರೆಳೆದರು.
1935ರ ಅಕ್ಟೋಬರ್ 24ರಂದು ಕೋಲ್ಕತ್ತಾದಲ್ಲಿ ಜನಿಸಿದ ಮಾರ್ಕ್, ಭಾರತದ ಮೇಲೆ ಅಪಾರ ಪ್ರೀತಿ ಹೊಂದಿದ್ದರು. ಬಿಬಿಸಿ ನವದೆಹಲಿ ಬ್ಯೂರೋ ಮುಖ್ಯಸ್ಥರಾಗಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು.
ಟುಲ್ಲಿ ಅವರ ಸೇವೆ ಗುರುತಿಸಿ 1992ರಲ್ಲಿ ಪದ್ಮಶ್ರೀ, 2002ರಲ್ಲಿ ಯುಕೆಯ ಹೊಸ ವರ್ಷದ ಗೌರವಗಳಲ್ಲಿ ಒಂದಾದ ನೈಟ್ ಪದವಿ ಹಾಗೂ 2005ರಲ್ಲಿ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಬ್ರಿಟನ್ ಹಾಗೂ ಭಾರತ ಎರಡೂ ದೇಶಗಳಲ್ಲಿ ಅಧಿಕೃತ ಗೌರವ ಪಡೆದ ಅಪರೂಪದ ವ್ಯಕ್ತಿಗಳಲ್ಲಿ ಟುಲ್ಲಿ ಒಬ್ಬರಾಗಿದ್ದರು.









